ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿಯಾಗಿದ್ದು, ಡ್ರೈವರ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಸಮೀಪವಿರುವ ಪೆಟ್ರೋಲ್ ಬಂಕ್ ಬಳಿ ಕಳೆದ ರಾತ್ರಿ ನಡೆದಿದೆ.
ಕ್ಯಾಂಟರ್ ಲಾರಿ ನೆಲಮಂಗಲದಿಂದ ಮಧುರೆ ಮಾರ್ಗವಾಗಿ ದೊಡ್ಡಬಳ್ಳಾಪುರಕ್ಕೆ ಬರುವ ವೇಳೆ ಎದುರುಗಡೆಯಿಂದ ವೇಗವಾಗಿ ಬರುತ್ತಿದ್ದ ಕಾರನ್ನು ಪಾರು ಮಾಡಲು ಹೋಗಿ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿದೆ. ನಿಯಂತ್ರಣ ತಪ್ಪಿದ ಹಿನ್ನೆಲೆ ರಸ್ತೆಯಲ್ಲಿ ಪಲ್ಟಿ ಹೊಡೆದಿದೆ.
ಅದೃಷ್ಟವಷಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಮಳೆಗಾಲ ಪ್ರಾರಂಭವಾಗಿದ್ದು, ರಸ್ತೆಗಳಲ್ಲಿ ಗುಂಡಿಗಳು ಸಹ ಇದ್ದು, ವಾಹನ ಸವಾರರು ಜವಾಬ್ದಾರಿಯುತವಾಗಿ ವಾಹನ ಚಲಾಯಿಸಬೇಕು…..