ಮಣಿಪುರ ಹಿಂಸಾಚಾರ: ಹಿಂಸಾಚಾರ ನಿಯಂತ್ರಣಕ್ಕೆ ಸೇನೆ ನಿಯೋಜನೆ: ಇಂಟರ್ನೆಟ್ ಸ್ಥಗಿತಗೊಳಿಸಿ ಕರ್ಫೂ ಹೇರಿಕೆ

ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ಬುಡಕಟ್ಟು ಗುಂಪುಗಳು ಮಣಿಪುರದಲ್ಲಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈ ಹಿನ್ನೆಲೆಯಲ್ಲಿ ಹಿಂಸಾಚಾರ ಹತ್ತಿಕ್ಕಲು ಸೇನೆ ನಿಯೋಜಿಸಿ, ಇಂಟರ್ನೆಟ್ ಸ್ಥಗಿತಗೊಳಿಸಿ ಕರ್ಫೂ ಜಾರಿ ಮಾಡಲಾಗಿದೆ.

ಉದ್ವಿಗ್ನ ಪರಿಸ್ಥಿತಿಯನ್ನು ಹತೋಟಿಯಲ್ಲಿಡಲು ಸೇನೆ ಹಾಗೂ ಅಸ್ಸಾಂ ರೈಫಲ್ಸ್‌ನಿಂದ ಧ್ವಜ ಮೆರವಣಿಗೆ ನಡೆಸಲಾಯಿತು.

ಮೇಟಿ ಸಮುದಾಯವನ್ನು ಎಸ್‌ಟಿ ವರ್ಗಕ್ಕೆ ಸೇರಿಸಬೇಕೆಂಬ ಬೇಡಿಕೆ ತೀವ್ರಗೊಳ್ಳುತ್ತಿದ್ದು, ಇದರ ವಿರುದ್ಧ ಮೆರವಣಿಗೆಗೆ ಕರೆ ನೀಡಿರುವುದಾಗಿ ತಿಳಿಸಿದರು. ರ್ಯಾಲಿಯಲ್ಲಿ ಸಾವಿರಾರು ಆಂದೋಲನಕಾರರು ಭಾಗವಹಿಸಿದ್ದರು ಮತ್ತು ಟೋರ್ಬಂಗ್ ಪ್ರದೇಶದಲ್ಲಿ ಬುಡಕಟ್ಟು ಮತ್ತು ಬುಡಕಟ್ಟು ಅಲ್ಲದವರ ನಡುವೆ ಹಿಂಸಾಚಾರ ವರದಿಯಾಗಿದೆ.

Leave a Reply

Your email address will not be published. Required fields are marked *