ವ್ಯಾಟಿಕನ್ ಸಿಟಿ: ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕ್ರಿಶ್ಚಿಯನ್ ಜಾಗತಿಕ ಧರ್ಮಗುರು ಪೋಪ್ ಫ್ರಾನ್ಸಿಸ್ (88) ಇಂದು (ಏ.21-ಸೋಮವಾರ) ಕೊನೆಯುಸಿರೆಳೆದಿದ್ದಾರೆ.
ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ 7:35 ಕ್ಕೆ ಫ್ರಾನ್ಸಿಸ್ ಇಹಲೋಕ ತ್ಯಜಿಸಿದರು ಎಂದು ವ್ಯಾಟಿಕನ್ ಪ್ರಕಟಣೆ ತಿಳಿಸಿದೆ.
ಅವರ ಇಡೀ ಜೀವನವು ಭಗವಂತನ ಮತ್ತು ಅವರ ಚರ್ಚ್ ಸೇವೆಗೆ ಸಮರ್ಪಿತವಾಗಿತ್ತು ಎಂದು ಫಾರೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೋಪ್ ಫ್ರಾನ್ಸಿಸ್ ಜಗತ್ತಿನಾದ್ಯಂತ 1.4 ಶತಕೋಟಿ ಜನರಿಗೆ ಆಧ್ಯಾತ್ಮಿಕ ಧರ್ಮಗುರುವಾಗಿದ್ದರು. 2013ರಿಂದ ಪೋಪ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಕಳೆದ ವರ್ಷ ಪೋಪ್ರನ್ನು ಭೇಟಿಯಾಗಿದ್ದ ಪ್ರಧಾನಿ ಮೋದಿ
ಕಳೆದ ವರ್ಷ ಜೂನ್‌ನಲ್ಲಿ, ಪ್ರಧಾನಿಯವರು G7 ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿಗೆ ಹೋಗಿದ್ದಾಗ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಿದ್ದರು. ಇದೇ ವೇಳೆ, ಭಾರತಕ್ಕೆ ಬನ್ನಿ ಎಂದು ಪೋಪ್ ಅವರಿಗೆ ಮೋದಿ ಆಹ್ವಾನ ನೀಡಿದ್ದರು. ಪೋಪ್ ಅವರೊಂದಿಗೆ ಪ್ರಧಾನಿ ಮೋದಿ ಅನೇಕ ವಿಷಯಗಳ ಕುರಿತು ಚರ್ಚಿಸಿದ್ದರು. ಆ ಸಮಯದಲ್ಲಿ ವಿಶ್ವದ ಅತಿದೊಡ್ಡ ಬಿಕ್ಕಟ್ಟಾದ ಕೊರೊನಾ ಬಗ್ಗೆಯೂ ಉಭಯರೂ ಸುದೀರ್ಘ ಮಾತುಕತೆ ನಡೆಸಿದ್ದರು.