ಮದ್ಯ, ದುಡ್ಡು ಕೊಟ್ಟು ಮತದಾರರರ ಮೇಲೆ ಕಾಂಗ್ರೆಸ್, ಬಿಜೆಪಿ ಪ್ರಭಾವ: ಜೆಡಿಎಸ್ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಪಿ ರಂಗನಾಥ ಆರೋಪ

ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ತಾಲ್ಲೂಕಿನ ಮತದಾರರನ್ನು ಹಣ ಕೊಟ್ಟು ಖರೀದಿಗೆ ಮುಂದಾಗಿದೆ ಎಂದು ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ ರಂಗನಾಥ ಆರೋಪಿಸಿದರು.

ನಗರದ ಜೆಡಿಎಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳು ವ್ಯಾಪರಸ್ಥರು, ವ್ಯಾಪರ ಹಿನ್ನೆಲೆಯುಳ್ಳವರಾಗಿದ್ದಾರೆ.

ಬಿಜೆಪಿ ಅಭ್ಯರ್ಥಿಗೆ ರೈತರ ನಿತ್ಯ ಜೀವನದ ಅರಿವಿಲ್ಲ, ಹೊಲ, ಗದ್ದೆ, ರೈತರ ಕಷ್ಟ ಯಾವುದು ಗೊತ್ತಿಲ್ಲ. ಇನ್ನೂ ಕಾಂಗ್ರೆಸ್ ಅಭ್ಯರ್ಥಿ ವ್ಯಾಪರೀಕರಣ ರಾಜಕಾರಣ ಮಾಡುತ್ತಿದ್ದಾರೆ, ಸ್ವಂತ ಪರಿಶ್ರಮದಿಂದ ಯಾವುದೇ ಕೆಲಸಗಳನ್ನು ಇದುವರೆಗೂ ತಾಲ್ಲೂಕಿನಲ್ಲಿ ಮಾಡಿಲ್ಲ ಎಂದರು.

ಮುನೇಗೌಡ ಅವರು ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾರೆ, ಸಂಕಷ್ಟ ಸಮಯದಲ್ಲಿ ತಾಲ್ಲೂಕಿನಾದ್ಯಂತ‌ ಕುಡಿಯಲು ನೀರನ್ನು ನೀಡಿದ್ದಾರೆ, ದೇವಾಲಯಗಳ ಜೀರ್ಣೊದ್ಧಾರವನ್ನು ತಮ್ಮ ಸ್ವಂತ ಖರ್ಚಿನಿಂದ ನೆರವೇರಿಸಿದ್ದಾರೆ.

ಕುಮಾರಸ್ವಾಮಿ ಪಂಚರತ್ನ ಯೋಜನೆ ಅನುಷ್ಠಾನವಾದರೆ ರಾಜ್ಯದಲ್ಲಿ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲು ಸಹಕಾರಿಯಾಗಲಿದೆ. ತಾಲ್ಲೂಕಿನಲ್ಲಿ ಈ ಬಾರಿಯ ಜನತೆ ಮುನೇಗೌಡ ಅವರನ್ನು ಗೆಲ್ಲಿಸಿ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಿಯೇ ತೀರುತ್ತಾರೆ ಎಂದರು.

ಟಿಎಪಿಎಂಸಿಎಸ್ ಅಧ್ಯಕ್ಷ ಅಂಜನಗೌಡ ಮಾತನಾಡಿ ಕುಮಾರಸ್ವಾಮಿ ರೈತ, ಕಾರ್ಮಿಕರ ಪರ ಕೆಲಸ‌ ಮಾಡಲಿದ್ದಾರೆ, ಈ ಬಾರಿ ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ‌ ಬರಲು ಸಕಲ ಸಿದ್ದತೆ ನಡೆಸಿದ್ದೂ ನಾಡಿನ ಜನತೆ ಆಶೀರ್ವಾದ ಮಾಡಲಿದ್ದಾರೆ.

ರಾಷ್ಟ್ರೀಯ ಪಕ್ಷಗಳಿಂದ ಹಣವಂತ, ಬಲಾಢ್ಯ ಅಭ್ಯರ್ಥಿಗಳು ಈ ಬಾರಿ ತಾಲ್ಲೂಕಿನಲ್ಲಿ ಸ್ಪರ್ಧಿಸುತ್ತಿದ್ದಾರೆ, ಜನರನ್ನು ಹಣದ ಮೂಲಕ ಕೊಂಡುಕೊಳ್ಳುವ ಎಲ್ಲಾ ಪ್ರಯತ್ನಗಳನ್ನು ಅಭ್ಯರ್ಥಿಗಳು ಮಾಡುತ್ತಿದ್ದಾರೆ.

ಚುನಾವಣಾ ಕಣದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ ಅವರು ಇದ್ದೂ ತಾಲ್ಲೂಕಿನಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಹಿಂದೆ ಜನತೆಗೆ ಕಷ್ಟಕಾಲದಲ್ಲಿ ಕುಡಿಯಲು ನೀರು ಸೇರಿದಂತೆ‌ ಸಮಾಜಿಕ ಸೇವೆಯನ್ನು ಸಲ್ಲಿಸಿದ್ದೂ ಇದರ ಆಧಾರದಲ್ಲಿ ಮತಯಾಚನೆಗೆ ಮುಂದಾಗಿದ್ದಾರೆ ಎಂದರು.

ಈ ವೇಳೆ ಡಾ.ವಿಜಯ್ ಕುಮಾರ್, ನಗರಸಭಾ ಸದಸ್ಯ ವಡ್ಡರಹಳ್ಳಿ ರವಿ, ಮಾಜಿ ನಗರಸಭಾ ಸದಸ್ಯ ಕೆಂಪರಾಜ್ ಇತರರು ಇದ್ದರು.

Leave a Reply

Your email address will not be published. Required fields are marked *