ಗಾಂಜಾ ಸಪ್ಲೈ ಮಾಡುತ್ತಿದ್ದ ಆರೋಪಿಯನ್ನು ಬಂಧನ ಮಾಡಲಾಗಿದೆ.
ಆಂಧ್ರಪ್ರದೇಶದಿಂದ ಗಾಂಜಾ ತಂದು ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಓರ್ವನನ್ನು ಬಂಧನ ಮಾಡಲಾಗಿದೆ.
ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ನಿವಾಸಿ ವಿಜಯ್ ಅಲಿಯಾಸ್ ಬಾಂದ್ರಾ (22) ಬಂಧಿತ ಆರೋಪಿ.
ಇನ್ಸ್ಪೆಕ್ಟರ್ ಪ್ರಶಾಂತ್ ನಾಯಕ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿತನನ್ನು ಬಂಧನ ಮಾಡಲಾಗಿದೆ.
ಬಂಧಿತ ಆರೋಪಿಯು ಕಳೆದ ಅನೇಕ ವರ್ಷಗಳಿಂದ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.
ಬಂಧಿತನಿಂದ ಒಂದು ಲಕ್ಷ ಮೌಲ್ಯದ 1 ಕೆ.ಜಿ 710 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.
ದೇವನಹಳ್ಳಿ ತಾಲೂಕು ವಿಜಯಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.