ನಗರದ ಬೆಸ್ಕಾಂ ಕಚೇರಿ ಎದುರಿನ ಎಪಿಎಂಸಿ ಗೇಟ್ ಬಳಿ ಹಿಟ್ & ರನ್ ಆಗಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಾರೊಂದು ವ್ಯಕ್ತಿಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಗಾಯಾಳುವಿನ ಹೆಸರು, ವಿಳಾಸ ಸದ್ಯ ತಿಳಿದುಬಂದಿರುವುದಿಲ್ಲ. ಪ್ರಜ್ಞೆ ತಪ್ಪಿ ರಕ್ತದ ಮಡುವಿನಲ್ಲಿಬಿದ್ದಿದ್ದ ವ್ಯಕ್ತಿಯನ್ನು ಸ್ಥಳೀಯರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…..