ಏರ್ಪೊಟ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದ ಹಿನ್ನೆಲೆ 7 ಮಂದಿ ಕಾರ್ಮಿಕರಿಗೆ ಗಾಯವಾಗಿರುವ ಘಟನೆ ನಡೆದಿದೆ.
ಕಾರ್ಮಿಕರನ್ನ ಕರೆದುಕೊಂಡು ಹೋಗುವ ವೇಳೆ ಡಿವೈಡರ್ಗೆ ಡಿಕ್ಕಿಹೊಡೆದು ಬಸ್ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.
ಕೆಂಪೇಗೌಡ ಏರ್ಪೊಟ್ ಗೆ ತೆರಳುವ ಬೇಗೂರು ಜಂಕ್ಷನ್ ಬಳಿ ಘಟನೆ ನಡೆದಿದೆ.
ಏರ್ಪೊಟ್ ನಲ್ಲಿ ಕೆಲಸ ಮಾಡುತ್ತಿದ್ದ 35 ಕಾರ್ಮಿಕರನ್ನ ಊಟಕ್ಕೆ ಕರೆದುಕೊಂಡು ಹೋಗುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಬಸ್ ಡಿಕ್ಕಿ ಹೊಡೆದಿದೆ.
ಗಾಯಗೊಂಡ 7 ಕಾರ್ಮಿಕರನ್ನ ದೇವನಹಳ್ಳಿ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.