ಹಲಸು ಬೆಳೆಗಾರನ ಮಗಳು ಎಸ್ ಎಸ್ ಎಲ್ ಸಿ‌ ಟಾಪರ್:‌ ಟಾಪರ್ ವಿದ್ಯಾರ್ಥಿನಿಗೆ ಪ್ರತಿಭಾ ಪುರಸ್ಕಾರ ನೀಡಿದ ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ಇಲ್ಲಿನ ತೂಬಗೆರೆ ಹಲಸು ತನ್ನ ಬಣ್ಣ ವಾಸನೆ ಮತ್ತು ರುಚಿಯಿಂದ ವಿಶೇಷವಾಗಿದ್ದು, ಈಗ ಈ ಭಾಗದ ಎಂಟು ತಳಿಗಳಿಗೆ ರಾಷ್ಟ್ರಮಟ್ಟದಲ್ಲಿ ಪೇಟೆಂಟ್ ಪಡೆದಿವೆ.ಈ ನಿಟ್ಟಿನಲ್ಲಿ ತೂಬಗೆರೆ ಹಲಸು ಬೆಳೆಗಾರರ ಸಂಘ, ಜಿಲ್ಲಾ ತೋಟಗಾರಿಕೆ ಇಲಾಖೆ ಮತ್ತು  ಭಾ.ಕೃ.ಅ.ಪ – ಕೃಷಿ ವಿಜ್ಞಾನ ಕೇಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಇವರುಗಳ ಸಹಯೋಗದೊಂದಿಗೆ “ಹಕ್ಕು ಸ್ವಾಮ್ಯ ಪ್ರಮಾಣಪತ್ರ ವಿತರಣೆ ಮತ್ತು ಕೃಷಿ – ವಿಜ್ಞಾನಿಗಳೊಂದಿಗೆ” ಸಂವಾದ ಕಾರ್ಯಕ್ರಮ ಜರುಗಿತು.

ಈ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ದೊಡ್ಡಬಳ್ಳಾಪುರ ತಾಲೂಕಿನ ಮೆಳೆಕೋಟೆ ಕ್ರಾಸ್ ನಲ್ಲಿರುವ ಎಸ್.ಜೆ.ಸಿ.ಆರ್ ಶಾಲೆಯ ರಂಜಿತಾ ಎ.ಸಿ ರವರಿಗೆ ವಕೀಲ ಪ್ರತಾಪ್ ಅವರಿಂದ ಪ್ರತಿಭಾ ಪುರಸ್ಕಾರ ಮಾಡಲಾಯಿತು.

ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿದ ವಕೀಲ ಪ್ರತಾಪ್, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ದೊಡ್ಡಬಳ್ಳಾಪುರ ತಾಲೂಕಿನ ಮೆಳೆಕೋಟೆ ಕ್ರಾಸ್ ನಲ್ಲಿರುವ ಎಸ್.ಜೆ.ಸಿ.ಆರ್ ಶಾಲೆಯ ರಂಜಿತಾ ಎ.ಸಿ ಅವರ ತಂದೆ ಹಲಸು ಬೆಳೆಗಾರರು. ಅವರು ಕಷ್ಟುಪಟ್ಟು ತನ್ನ ಮಕ್ಕಳನ್ನು ಓದಿಸುತ್ತಿದ್ದಾರೆ. ಇವರ ಮಗಳು ರಂಜಿತಾ ಎ.ಸಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇದು ನಮ್ಮ ತಾಲೂಕಿಗೆ ಹೆಮ್ಮೆಯ ವಿಷಯ ಎಂದರು.

ರಂಜಿತಾ ಎ.ಸಿ ಅವರು ಉನ್ನತ ವ್ಯಾಸಂಗ ಪೂರೈಸಿ ಸಮಾಜದ ಸೇವೆಗಾಗಿ ಉನ್ನತ ಅಧಿಕಾರಿಯಾಗಬೇಕೆಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದರು.

ಈ ವೇಳೆ ವಿಶ್ರಾಂತ ಕುಲಪತಿ ನಾರಾಯಣ ಗೌಡ, ಜಿಕೆವಿಕೆ ವಿಜ್ಞಾನಿ ಡಾ ಶಾಮಲಾ, ತೂಬಗೆರೆ ಹಲಸು ಬೆಳೆಗಾರರ ಸಂಘದ ಕಾರ್ಯದರ್ಶಿ ರವಿಕುಮಾರ್, ಪಿಪಿಎಫ್‌ಆರ್‌ಎ ಪೇಟೆಂಟ್ ಪಡೆದ ಹಲಸು ಬೆಳೆಗಾರ ಕೃಷ್ಣಪ್ಪ, ಜಿಕೆವಿಕೆ ವಿಜ್ಞಾನಿಗಳಾದ ಡಾ.ಹನುಮಂತರಾಯ, ಡಾ. ಬಾಬು ರೈ, ಡಾ. ಸವಿತಾ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅರವಿಂದ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುನಿಲಕ್ಷ್ಮಮ್ಮ ರಾಮಕೃಷ್ಣ,  ಸದಸ್ಯ ಕೃಷ್ಣಪ್ಪ (ಕಿಟ್ಟಿ).ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜು ಅಪ್ಪಯ್ಯಣ್ಣ, ತೆಂಗು ನಾರು ಮಂಡಳಿ ಅಧ್ಯಕ್ಷ ವೆಂಕಟೇಶ್ ಬಾಬು, ತೂಬಗೆರೆ ಹಲಸು ಬೆಳೆಗಾರರ ಸಂಘದ ಅಧ್ಯಕ್ಷ ಸುರೇಶ್, ವಕೀಲ ಪ್ರತಾಪ್, ಮುಖಂಡರಾದ ವೆಂಕಟೇಶ್, ಕನಕದಾಸ,  ರವಿಸಿದ್ದಪ್ಪ, ಉದಯ ಆರಾಧ್ಯ, ವಾಸು, ರಂಗಪ್ಪ, ಶ್ರೀಧರ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *