ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

ಕೋಲಾರ: ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಹಳೆ ಕಟ್ಟಡವನ್ನು ತೆರವುಗೊಳಿಸಿ ಸುಸಜ್ಜಿತವಾದ ಹೊಸ ಕಟ್ಟಡವನ್ನು ನಿರ್ಮಿಸಲು ಸರ್ಕಾರದಿಂದ ಸುಮಾರು 22.50 ಕೋಟಿ ಅನುದಾನ ಬಿಡುಗಡೆಯಾಗಿದ್ದು ಕೂಡಲೇ ಕಾಮಗಾರಿ ಪ್ರಾರಂಭಿಸಲು ಕ್ರಮ ವಹಿಸಲಾಗಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು

ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ 2024 -25 ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ ಹಾಗೂ ಸ್ಮರಣೆ ಸಂಚಿಕೆ ಬಿಡುಗಡೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದಿಂದ ಶಾಲಾ-ಕಾಲೇಜುಗಳ ಅಭಿವೃದ್ಧಿಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ರವರೊಂದಿಗೆ ಮಾತುಕತೆಯ ಫಲವಾಗಿ ಮುಂದಿನ ದಿನಗಳಲ್ಲಿ ಎರಡೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ಧಿಗೆ 40 ಕೋಟಿ ಹಾಗೂ ಕಾನೂನು ಕಾಲೇಜಿಗೆ 4.50 ಕೋಟಿ ಬಿಡುಗಡೆಗೂ ಒಪ್ಪಿಗೆ ನೀಡಿದ್ದು, ಈ ವರ್ಷದಿಂದಲೇ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ಕೋಲಾರ ಜಿಲ್ಲೆಯ ಮಣ್ಣಿನ ಗುಣದಿಂದಲೇ ಅನೇಕ ಬುದ್ದಿವಂತರು ಪ್ರತಿಯೊಂದು ಕ್ಷೇತ್ರಗಳಲ್ಲಿ ಪ್ರವೇಶ ಮಾಡಿದ್ದಾರೆ ಸಾಧ್ಯವಾಗಿದೆ ಜಿಲ್ಲೆಯಿಂದ ಕೆ.ಎ.ಎಸ್.ಐ.ಎ.ಎಸ್.ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಆಗುತ್ತಿರುವುದು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಾಧಕರಾಗಿ ಹುಟ್ಟಿಕೊಂಡಿರುವುದು ಈ ಮಣ್ಣಿನ ಗುಣವೇ ತೋರಿಸುತ್ತದೆ ಹೆಣ್ಣು ಮಕ್ಕಳಿಗೆ ಹೆಚ್ಚಿನ ಅವಕಾಶಗಳು ಇದ್ದು ಸದುಪಯೋಗ ಪಡಿಸಿಕೊಳ್ಳಬೇಕಾಗಿದೆ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಶ್ರೀನಿವಾಸಗೌಡ ಮಾತನಾಡಿ ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚಿನ ಆಧ್ಯತೆ ನೀಡಲಾಗುತ್ತಿದೆ ವಿಶೇಷವಾಗಿ ವಿದ್ಯಾರ್ಥಿನಿಯರು ಗ್ರಾಮೀಣ ಪ್ರದೇಶಗಳಿಂದ ಬಂದು ಆಸಕ್ತಿಯಿಂದ ಅಧ್ಯಯನ ನಡೆಸಿ, ತಮ್ಮ ಮುಂದಿನ ಬದುಕನ್ನು ಹಸನುಗೊಳಿಸಿಕೊಳ್ಳಬೇಕು. ಈ ಕಾಲೇಜಿನಲ್ಲಿ ಓದಿದ ಬಹುತೇಕರು ಈ ಜಿಲ್ಲೆಯಿಂದ ಸಾಧಕರಾಗಿದ್ದಾರೆ ಎಲ್ಲ ಕಡೆ ಕಾಣಿಸಿಕೊಳ್ಳುವಂತಾಗಿದೆ. ಈ ಪರಂಪರೆಯನ್ನು ಮುಂದುವರೆಯಬೇಕು ಮದುವೆಗೆ ಸೀಮಿತವಾಗದೇ ಶಿಕ್ಷಣಕ್ಕೆ ಆಧ್ಯತೆ ನೀಡುವಂತೆ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಮಹಾರಾಣಿ ಕಾಲೇಜಿನ ಕನ್ನಡ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ ಎಂ.ಎಸ್ ಆಶಾದೇವಿ ಮಾತನಾಡಿ ಇವತ್ತು ಶಿಕ್ಷಣದಿಂದ ಮಹಿಳೆಯರ ಸ್ಥಿತಿಗತಿಗಳನ್ನು ತಿಳಿಯಲು ಸಾಧ್ಯವಾಗಿದೆ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಮುಂದುವರೆಯಲು ಶಿಕ್ಷಣ ಕಾರಣವಾಗಿದೆ ಮಹಿಳೆಯರಿಗೆ ಕಣ್ಣು ಮುಂದೆ ಅವಕಾಶಗಳು ಇವೆ ಸದುಪಯೋಗ ಪಡಿಸಿಕೊಳ್ಳುವ ಮೂಲಕ ಸಾಧಕರಾಗಬೇಕಾಗಿದೆ ಎಂದರು

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್, ಕಾಲೇಜಿನ ಪ್ರಾಂಶುಪಾಲ ಗಂಗಾಧರ್ ರಾವ್, ಬೆಂಗಳೂರು ಉತ್ತರ ವಿವಿ ಸಿಂಡಿಕೇಟ್ ಸದಸ್ಯರಾದ ಸೀಸಂದ್ರ ಗೋಪಾಲಗೌಡ, ಅರ್ಬಾಜ್ ಅಹಮದ್, ಜೈದೀಪ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಕೆ.ರಘುಕುಮಾರ್, ಮಹಮ್ಮದ್ ಅಲ್ಲಾವುದ್ದೀನ್ ಮನ್ಸೂರ್, ಷೇಕ್ ಜಮೀರ್ ಅಹಮದ್, ವಿಜಯನಗರ ಮಂಜುನಾಥ್, ಪೂರ್ಣಿಮಾ, ವೆಂಕಟಸ್ವಾಮಿ ಸೇರಿದಂತೆ ಬೋಧಕ ಸಿಬ್ಬಂದಿ ಅಥಿತಿ ಉಪನ್ಯಾಸಕರು ಇದ್ದರು.

Leave a Reply

Your email address will not be published. Required fields are marked *