ಕಸದ ರಾಶಿ ಮೇಲೆ ನವಜಾತ ಶಿಶು ಪತ್ತೆಯಾಗಿರುವ ಘಟನೆ ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಾದನಾಯಕನಹಳ್ಳಿ ರಸ್ತೆಪಕ್ಕದಲ್ಲಿ ಕಸದ ರಾಶಿ ಮೇಲೆ ನವಜಾತ ಗಂಡು ಶಿಶುವನ್ನು ಪಾಪಿಗಳು ಬಿಸಾಡಿದ್ದ ಹೋಗಿದ್ದರು. ಮಗು ಅಳುತ್ತಿದ್ದಿದ್ದನ್ನು ಸ್ಥಳೀಯರು ಗಮನಿಸಿದ್ದಾರೆ. ಕೂಡಲೇ ಸ್ಥಳೀಯರು ಮಾದನಾಯಕನಹಳ್ಳಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.
ಕೂಡಲೇ ಇನ್ಸ್ಪೆಕ್ಟರ್ ಮುರುಳಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಮಗುವನ್ನು ರಕ್ಷಣೆ ಮಾಡಿದ್ದಾರೆ. ಮಗುವನ್ನ ರಕ್ಷಿಸಿ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಆಹಾರ ಇಲ್ಲದೆ ನರಳಾಡುತ್ತಿದ್ದ ಮಗುವಿಗೆ ಆರೈಕೆ ಮಾಡಲಾಗುತ್ತಿದೆ.
ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.