ದೊಡ್ಡಬಳ್ಳಾಪುರ: ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್) ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯ ಶಾಂತಿಯುತವಾಗಿ ಮುಕ್ತಾಯಗೊಂಡು, ಫಲಿತಾಂಶ ಕೂಡ ಹೊರಬಂದಿದೆ. ಬಮೂಲ್ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಸಿ ಆನಂದ್ ಅವರು ಗೆಲುವು ಸಾಧಿಸಿದ್ದಾರೆ.
ಒಟ್ಟು 201 ಮತಗಳಲ್ಲಿ 156ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಇವರ ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಹಸ್ಕೂರ್ ಟಿ.ಆನಂದ್ ಅವರು ಕೇವಲ 40 ಮತಗಳನ್ನು ಪಡೆದು ಪರಾಭಾವಗೊಂಡಿದ್ದಾರೆ. ಇನ್ನುಳಿದ 5 ಮತಗಳು ಅಸಿಂಧುಗೊಂಡಿವೆ ಎಂದು ತಿಳಿದು ಬಂದಿದೆ.
ಇಂದು ಬೆಂಗಳೂರು ಡೇರಿ ವೃತ್ತ ಸಮೀಪ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ಬೆಳಿಗ್ಗೆ 9-00 ಗಂಟೆಯಿಂದ ಸಂಜೆ 4-00 ಗಂಟೆಯವರೆಗೆ ಮತದಾನ ನಡೆದಿದ್ದು, ಸಂಜೆ ಫಲಿತಾಂಶ ಹೊರಬಿದ್ದಿದೆ. ಬಮೂಲ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹುಸ್ಕೂರು ಆನಂದ್ ವಿರುದ್ಧ ಬಿಜೆಪಿ ಅಭ್ಯರ್ಥಿ ಬಿ.ಸಿ ಆನಂದ್ ಕುಮಾರ್ ಜಯಸಾಧಿಸಿದ್ದಾರೆ.
ದೊಡ್ಡಬಳ್ಳಾಪುರ ಮತ ಕ್ಷೇತ್ರದ ಎಣಿಕೆಯನ್ನು ನ್ಯಾಯಾಲಯದ ತೀರ್ಪಿನ ಬಳಿಕ ನಡೆಸಲಾಗುವುದು ಎಂದು ಗೊಂದಲ ಸೃಷ್ಟಿ ಆಗಿತ್ತು. ಇದೀಗ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲಾಗಿದೆ.