ದೊಡ್ಡಬಳ್ಳಾಪುರ ನಗರಸಭೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಲೋಕಾಯುಕ್ತ ಎಸ್ ಪಿ ಪವನ್ ನೆಜ್ಜೂರ್ ನೇತೃತ್ವದಲ್ಲಿ ಕಡತಗಳ ಪರಿಶೀಲನೆ ನಡೆಸಲಾಗುತ್ತಿದೆ.
ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್ ಕಚೇರಿಯಲ್ಲಿ ಕಡತಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ….
ಅಧಿಕಾರಿಗಳ ಹಾಜರಾತಿ, ಹಣದ ವ್ಯವಹಾರ ಸೇರಿದಂತೆ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ….
ಎಸ್ ಪಿ ಪವನ್ ನೆಜ್ಜೂರ್, ಡಿವೈಎಸ್ ಪಿ ಗಿರೀಶ್ ರೋಡ್ಕರ್, ಇನ್ಸ್ ಪೆಕ್ಟರ್ ಉಮಾಮಹೇಶ್, ಬಾಳಪ್ಪ, ಪಿ.ಮಹೇಶ್, ನಂದಕುಮಾರ್, ರಮೇಶ್ ಹಾಗೂ ಸಿಬ್ಬಂದಿ ಹಾಜರಿದ್ದರು.