‘ಈ ಸಲ ಕಪ್ ನಮ್ದು’: 18 ವರ್ಷಗಳ ಬಳಿಕ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಆರ್ ಸಿಬಿ: ಅಭಿಮಾನಿಗಳಿಗೆ ಖುಷಿಯೋ ಖುಷಿ

ಹಾಲಿ ಐಪಿಎಲ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಚೊಚ್ಚಲ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಿದೆ…..

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ರನ್ ಗಳ ಅಂತರದಲ್ಲಿ ಮಣಿಸಿ 18 ವರ್ಷಗಳ ಬಳಿಕ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ.

ಹದಿನೆಂಟು ವರ್ಷಗಳ ಕಾಯುವಿಕೆ ಈ ಬಾರಿ ಅಂತ್ಯವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟಾಟಾ ಐಪಿಎಲ್ ನ ನೂತನ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಅಹಮದಾಬಾದ್ ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 6 ರನ್ ಗಳಿಂದ ಗೆಲುವು ಸಾಧಿಸುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸು ನನಸಾಗಿದೆ.

ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ಕೆ ಮಾಡಿದರು.
ಬ್ಯಾಟಿಂಗ್ ಆಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಆಟಗಾರರಾದ ವಿರಾಟ್ ಕೊಹ್ಲಿ (43) ಹಾಗೂ ಪಿಲ್ ಸಾಲ್ಟ್ (16) ಉತ್ತಮ ಅಡಿಪಾಯ ಹಾಕಿದರು.

ನಂತರ ಬಂದ ಕನ್ನಡಿಗ ಮಾಯಾಂಕ್ ಅಗರ್ವಾಲ್ (24), ನಾಯಕ ರಜತ್ ಪಾಟಿದರ್ (26), ಲಿವಿಂಗ್ ಸ್ಟನ್ (25) ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಜಿತೇಶ್ ಶರ್ಮಾ (24) ರನ್ ಗಳಿಸಿ ತಂಡದ ಮೊತ್ತವನ್ನು 190 ರನ್ ಪೇರಿಸಿದರು.

ಗುರಿ ಬೆನ್ನತ್ತಿದ್ದ ಪಂಜಾಬ್ ಕಿಂಗ್ಸ್ ತಂಡದ ಆರಂಭಿಕ ಆಟಗಾರರಾದ ಪ್ರಿಯಾಂಶ ಆರ್ಯ (24) ಹಾಗೂ ಪ್ರಭು ಸಿಮ್ರಾನ್ ಸಿಂಗ್ (26) ಉತ್ತಮ ಆರಂಭ ಪಡೆದರೂ ಜೋಶ್ ಹೆಜಲ್ವುಡ್ ಆರಂಭಿಕ ಜೊತೆಯಾಟವನ್ನು ಬೇರ್ಪಡಿಸಿದರು.

ನಂತರ ಬಂದ ಜೋಶ್ ಇಂಗ್ಲಿಷ್ (39) ಹಾಗೂ ಶಶಾಂಕ್ ಸಿಂಗ್ (61) ಗಳಿಸಿದರು. ಉಳಿದ ಬ್ಯಾಟರ್ ಗಳು ಉತ್ತಮ ರನ್ ಪೇರಿಸುವಲ್ಲಿ ವಿಫಲರಾದರು.

ರಾಯಲ್ ಚಾಲೆಂಜರ್ಸ್ ಪರವಾಗಿ ಕ್ರುನಲ್ ಪಾಂಡ್ಯ ಹಾಗೂ ಭುವನೇಶ್ವರ್ ಕುಮಾರ್ ತಲಾ 2 ವಿಕೆಟ್ ಪಡೆದರು. ಉಳಿದಂತೆ ಜೋಶ್ ಹೆಜಲ್ವುಡ್, ಯಶ್ ದಯಾಳ್ ಹಾಗೂ ಶೆಪರ್ಡ್ ತಲಾ ಒಂದು ವಿಕೆಟ್ ಪಡೆದು ಪಂಜಾಬ್ ಕಿಂಗ್ಸ್ ಗೆ ಕಡಿವಾಣ ಹಾಕುವ ಮೂಲಕ ಚಾಂಪಿಯನ್ ಶಿಪ್ ಪಟ್ಟ ಅಲಂಕರಿಸಿದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ರನ್ ಗಳ ಅಂತರದಲ್ಲಿ ಮಣಿಸಿ 18 ವರ್ಷಗಳ ಬಳಿಕ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿರುವುದರಿಂದ ಅಭಿಮಾನಿಗಳಿಗೆ ಖುಷಿಯೋ ಖುಷಿ. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಗುತ್ತಿದೆ…..

Leave a Reply

Your email address will not be published. Required fields are marked *