ಚೊಚ್ಚಲ ಐಪಿಎಲ್ ಟ್ರೋಫಿಗೆ ಮುತ್ತಿಟ್ಟ “ಕೊಹ್ಲಿ”: ಕಪ್ ಪಡೆದ ನಂತರ “ವಿರಾಟ್” ಭಾವುಕ

ಬರೊಬ್ಬರಿ 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದ್ದು, ಈ ಬಗ್ಗೆ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಭಾವುಕರಾಗಿ ಈ ಗೆಲುವನ್ನು ಅದ್ಭುತ ಎಂದು ಬಣ್ಣಿಸಿದ್ದಾರೆ.

‘ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವಾಗಿತ್ತೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯವಾಗಿತ್ತು. ನಾನು ನನ್ನ ಯೌವನ, ನನ್ನ ಅತ್ಯುತ್ತಮ ಮತ್ತು ನನ್ನ ಅನುಭವವನ್ನು ಈ ತಂಡಕ್ಕೆ ನೀಡಿದ್ದೇನೆ. ಪ್ರತಿ ಸೀಸನ್‌ನಲ್ಲಿ ಟ್ರೋಫಿ ಗೆಲ್ಲಲು ಪ್ರಯತ್ನಿಸಿದೆ ಎಂದು ಹೇಳಿದರು.

‘ಈ ದಿನ ಬರುತ್ತದೆ ಎಂದು ಎಂದಿಗೂ ಭಾವಿಸಿರಲಿಲ್ಲ, ಗೆದ್ದ ನಂತರ ನಾನು ಭಾವುಕನಾದೆ. ನನ್ನ ಹೃದಯ ಬೆಂಗಳೂರಿನೊಂದಿಗೆ ಇದೆ, ನನ್ನ ಆತ್ಮ ಬೆಂಗಳೂರಿನೊಂದಿಗೆ ಇದೆ. ನಾನು ಈ ತಂಡಕ್ಕೆ ನಿಷ್ಠನಾಗಿ ಉಳಿದಿದ್ದೇನೆ. ಕಪ್ ಗೆಲ್ಲಬೇಕೆಂದು ನಾನು ಯಾವಾಗಲೂ ಕನಸು ಕಂಡಿದ್ದೆ. ಈ ಗೆಲುವಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಅಂತಿಮವಾಗಿ ಗೆಲುವನ್ನು ನನ್ನ ಮಡಿಲಿಗೆ ಕೊಟ್ಟಿದ್ದಕ್ಕಾಗಿ ದೇವರಿಗೆ ತುಂಬಾ ಕೃತಜ್ಞನಾಗಿದ್ದೇನೆ ಎಂದು ಭಾವುಕರಾದರು.

Leave a Reply

Your email address will not be published. Required fields are marked *