ಆರ್‌ಸಿಬಿ ವಿಜಯೋತ್ಸವ ಕಾಲ್ತುಳಿತ ಪ್ರಕರಣ: ದುರಂತದ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರಕಾರವೇ ಹೊತ್ತುಕೊಳ್ಳಬೇಕು- ಕೇಂದ್ರ ಸಚಿವ ಎಚ್ ಡಿಕೆ ಹೇಳಿಕೆ

ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ ಎಂದು ಕೇಂದ್ರ ಮಂತ್ರಿ ಹಾಗೂ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧರ ಜೀವ ನಷ್ಟವಾಗಿರುವುದು ನನಗೆ ಅತೀವ ದುಃಖ ತಂದಿದೆ ಎಂದು ಹೇಳಿದ್ದಾರೆ.

ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ದುರಂತದ ಹೊಣೆಯನ್ನು ರಾಜ್ಯ ಕಾಂಗ್ರೆಸ್  ಸರಕಾರವೇ ಹೊತ್ತುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವುದರ ಜತೆಗೆ ಮೃತರ ಕುಟುಂಬಗಳ ನೆರವಿಗೆ ಸರಕಾರ ಕೂಡಲೇ ಧಾವಿಸಬೇಕು ಎಂದು ಆಗ್ರಹಿಸಿದ್ದಾರೆ.

ಕ್ರೀಡಾಂಗಣ ಹಾಗೂ ವಿಧಾನಸೌಧದ ಬಳಿ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಬಂದಿದ್ದ ಕ್ರಿಕೆಟ್ ಪ್ರೇಮಿಗಳು ಗಾಬರಿ, ಆತುರಕ್ಕೆ ಒಳಗಾಗದೆ ಕ್ಷೇಮವಾಗಿ ಮನೆ ತಲುಪಬೇಕು ಎಂಬುದು ನನ್ನ ಕಳಕಳಿ. ಪೊಲೀಸರು ಈ ನಿಟ್ಟಿನಲ್ಲಿ ತುರ್ತುಕ್ರಮ ವಹಿಸಿ ಜನರಿಗೆ ನೆರವಾಗಬೇಕು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *