ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತವಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಲಮಂಗಲ ನಗರದ ಕುಣಿಗಲ್ ಬೈಪಾಸ್ ನಲ್ಲಿ ನಡೆದಿದೆ.

ವೇಗವಾಗಿ ಬಂದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ  ಸ್ಥಳದಲ್ಲೇ ಬೆಂಗಳೂರಿನ ಶ್ರೀರಾಮಪುರ ಮೂಲದ ಪ್ರಜ್ವಲ್ (22), ಸಹನ (21) ಸಾವನ್ನಪ್ಪಿದ್ದಾರೆ.

ಕುಣಿಗಲ್ ನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಅಪಘಾತ ನಡೆದಿದೆ. ಅಪಘಾತಕ್ಕೆ ಕಾರಣವಾದ ಲಾರಿ ಸಮೇತ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌

Leave a Reply

Your email address will not be published. Required fields are marked *