ಮೊಬೈಲ್‌ನಲ್ಲಿ ಮಹಿಳೆಯರ 13,500 ಕ್ಕೂ ಹೆಚ್ಚು ಅಶ್ಲೀಲ ಫೋಟೋ ಪತ್ತೆಯಾಗಿದೆ. ಬ್ಲಾಕ್‌ಮೇಲ್ ಮಾಡುತ್ತಿದ್ದ ಸೈಕೋ ವ್ಯಕ್ತಿಯನ್ನು ಅರೆಸ್ಟ್ ಮಾಡಲಾಗಿದೆ.
ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಯುವತಿಯರೊಂದಿಗೆ ಸ್ನೇಹ ಬೆಳೆಸಿ, ನಂತರ ಅವರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಕರ್ನಾಟಕ ಮೂಲದ ವ್ಯಕ್ತಿನ್ನು ಮುಂಬೈನ ದಹಿಸರ್ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು ಕೃತಕ ಬುದ್ಧಿಮತ್ತೆ (AI) ಬಳಸಿ ಅಶ್ಲೀಲ ಚಿತ್ರಗಳನ್ನು ತಯಾರಿಸುತ್ತಿದ್ದ. ನಂತರ ಸಂತ್ರಸ್ತ ಮಹಿಳೆಯರಿಗೆ ವಿಡಿಯೋ ಕರೆ ಮಾಡಿ ನಗ್ನವಾಗುವಂತೆ ಬೆದರಿಕೆ ಹಾಕುತ್ತಿದ್ದ.
19 ವರ್ಷದ ಬಾಲಕಿ ದೂರು ನೀಡಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದ್ದು, ಆತನ ಮೊಬೈಲ್ ಫೋನ್‌ನಲ್ಲಿ 13,000 ಕ್ಕೂ ಹೆಚ್ಚು ಹುಡುಗಿಯರ ಫೋಟೋಗಳು ಸಂಗ್ರಹವಾಗಿರುವುದು ಪತ್ತೆಯಾಗಿದೆ.
ಡಿಜಿಟಲ್ ಹೆಜ್ಜೆಗುರುತುಗಳು ಮತ್ತು ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಗೂಗಲ್‌ನ ವಿವರಗಳನ್ನು ಒಳಗೊಂಡಂತೆ ಎಲ್ಲಾ ವಿವರಗಳನ್ನು ಪೊಲೀಸರು ಕಲೆ ಹಾಕಿದ್ದಾರೆ.
ಪೊಲೀಸರು ಆರೋಪಿಯ ಐಪಿ ವಿಳಾಸವನ್ನು ಕರ್ನಾಟಕದ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಪತ್ತೆಹಚ್ಚಿದರು. ನಂತರ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿರುವ ಶುಭಂ ಕುಮಾರ್ ಮನೋಜ್‌ಪ್ರಸಾದ್ ಸಿಂಗ್ (25) ಎಂದು ಗುರುತಿಸಲಾದ ಆರೋಪಿಯನ್ನು ಬಂಧಿಸಲಾಯಿತು.