ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರನಾಳದಲ್ಲಿ ಸುಮಾರು 1,500 ಜನ ಸಂಖ್ಯೆ ಇರುವ ಗ್ರಾಮದಲ್ಲಿ ಶುದ್ಧಕುಡಿಯುವ ನೀರಿನ ಘಟಕ ಕೆಟ್ಟು ನಿಂತು ಒಂದು ತಿಂಗಳು ಕಳೆಯುತ್ತ ಬಂದಿದ್ದರು ಸಹ ಇಲ್ಲಿಯವರೆಗೂ ದುರಸ್ತಿ ಮಾಡಿಸಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಹತ್ತಾರು ಬಾರಿ ಮನವಿ ಮಾಡಿದ್ದರು ನೆಪಗಳನ್ನು ಹೇಳುತ್ತಲೇ ಕಾಲ ಕಳೆಯಲಾಗುತ್ತಿದೆ ವಿನಹ ಶುದ್ಧೀಕರಣ ಘಟಕದ ದುರಸ್ತಿಯಾಗಿಲ್ಲ ಎಂದು ಆರೋಪಿಸಿದ್ದಾರೆ.
ಗ್ರಾಮದಲ್ಲಿ ಕುಡಿಯಲು ಶುದ್ಧ ನೀರು ಇಲ್ಲದೆ ಪಕ್ಕದ ಗ್ರಾಮಗಳಿಂದ ತಂದು ಕುಡಿಯುವ ಸ್ಥಿತಿ ನಿರ್ಮಾಣವಾಗಿದೆ. ಶುದ್ಧ ಕುಡಿಯುವ ನೀರಿನ ಘಟಕದ ನಿರ್ವಹಣೆಯ ಗುತ್ತಿಗೆ ಪಡೆದಿರುವವರ ದೂರವಾಣಿ ಸಂಖ್ಯೆಯನ್ನು ಘಟಕದ ಬಳಿ ಬರೆದಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.