ಕೋಲಾರ: ನಗರದ ಎಸ್.ಎನ್.ಆರ್ ಜಿಲ್ಲಾ ಆಸ್ಪತ್ರೆಗೆ ಶನಿವಾರ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯ ಮೂಲಸೌಕರ್ಯ ಹಾಗೂ ಕುಂದು ಕೊರತೆಗಳ ಬಗ್ಗೆ ಪರಿಶೀಲಿಸಿದರು.
ಆಸ್ಪತ್ರೆಯ ವೈದ್ಯರು ಸೇರಿದಂತೆ ಸಿಬ್ಬಂದಿಯ ಹಾಜರಾತಿ ಪುಸ್ತಕ, ಆಡಳಿತದ ಖರ್ಚು ವೆಚ್ಚದ ಕಡತಗಳನ್ನು ಪರಿಶೀಲಿಸಿ, ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಿರಬೇಕು ಎಂದು ಸೂಚಿಸಿದರು ನಂತರ ವಿವಿಧ ವಾರ್ಡ್ಗಳಿಗೆ ತೆರಳಿ ರೋಗಿಗಳ ಆರೋಗ್ಯ ವಿಚಾರಿಸಿದರು.
ನಂತರ ಪತ್ರಕರ್ತರೊಂದಿಗೆ ಮಾತನಾಡಿ ರಾಜ್ಯದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಅಂತಹ ಖಾಯಿಲೆಗಳು ಹೆಚ್ಚಾಗುತ್ತಾ ಇದ್ದು ಸ್ವಚ್ಚತೆ ಕಾಪಾಡಲು ಖಾಯಿಲೆ ಬರದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ನಗರಸಭೆ ಹಾಗೂ ಆಸ್ಪತ್ರೆಯ ಅಧಿಕಾರಿಗಳಿಗೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಜೊತೆಗೆ ಖಾಸಗಿ ಆಸ್ಪತ್ರೆಗಳ ಮಾಫೀಯಾ ನಡೆಯುತ್ತಿದ್ದು ಯಾವುದೇ ಕಾರಣಕ್ಕೂ ಖಾಸಗಿ ಆಸ್ಪತ್ರೆ ಹಾಗೂ ಔಷಧ ಅಂಗಡಿಗಳಲ್ಲಿ ಖರೀದಿಸಲು ಚೀಟಿ ಬರೆದುಕೊಟ್ಟಿದ್ದು ಕಂಡು ಬಂದಲ್ಲಿ ಶಿಸ್ತುಕ್ರಮ ಕೈಗೊಳ್ಳುವುದಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಆಸ್ಪತ್ರೆಯ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು, ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರ ಜೊತೆಗೆ ಸೌಜನ್ಯವಾಗಿ ವರ್ತಿಸಬೇಕು ದಿನನಿತ್ಯ ಸುಮಾರು 1200 ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಹೊರರೋಗಿಗಳು ಚಿಕಿತ್ಸೆಗೆ ಬರುತ್ತಾರೆ ಜೊತೆಗೆ ರಕ್ಷಣೆಯ ದೃಷ್ಟಿಯಿಂದ ತಾಯಿ ಮಕ್ಕಳ ವಾರ್ಡ್ ನಲ್ಲಿ ಪಾಸ್ ಮತ್ತು ಟ್ಯಾಗ್ ಕಡ್ಡಾಯವಾಗಿ ಕೊಟ್ಟು ಅವರ ಬಗ್ಗೆ ನಿಗಾ ವಹಿಸಬೇಕು ಸುಮಾರು ಹತ್ತು ಕೋಟಿ ವೆಚ್ಚದಲ್ಲಿ ಸಣ್ಣ ಪುಟ್ಟ ಕಾಮಗಾರಿಗಳು ನಡೆಯುತ್ತಿವೆ ಮೂಲಭೂತ ಸೌಕರ್ಯಗಳ ನೀಡಿ ಮುಂದೆ ಎಲ್ಲಾ ಸೌಲಭ್ಯಗಳನ್ನು ಒಂದೇ ಕಡೆಯಲ್ಲಿ ಸಿಗುವಂತೆ ಮಾಡಲಾಗುತ್ತದೆ ಎಂದರು
ಜಿಲ್ಲಾ ಆಸ್ಪತ್ರೆಯಲ್ಲಿ ಸಣ್ಣ ಪುಟ್ಟ ಸಮಸ್ಯೆ ಇದ್ದೇ ಇರುತ್ತದೆ ಇಲ್ಲ ಅಂತ ಹೇಳಿಲ್ಲ ಅದನ್ನು ವೈದ್ಯರು ಮತ್ತು ಸಿಬ್ಬಂದಿ ತಿದ್ದಿಕೊಳ್ಳಬೇಕು ಇಲ್ಲಿ ಪಾರ್ಕಿಂಗ್ ಸಮಸ್ಯೆಯ ಜೊತೆಗೆ ಖಾಸಗಿ ಆಂಬುಲೆನ್ಸ್ ಗಳ ಹಾವಳಿ ಹೆಚ್ಚಾಗಿದೆ ಮುಂದೆ ಎಲ್ಲವೂ ಸರಿಹೋಗುತ್ತದೆ ಎಂದರು ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಜಿಲ್ಲಾ ಸರ್ಜನ್ ಜಗದೀಶ್ ಸೇರಿದಂತೆ ವೈದ್ಯರು ಸಿಬ್ಬಂದಿ ಇದ್ದರು.