ಬೆಂಗಳೂರು ಜಿಲ್ಲಾ ಪೊಲೀಸ್, ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಇಂದು ಹೊಸಹಳ್ಳಿ ಸರ್ಕಾರಿ ಪ್ರೌಢ ಶಾಲೆಯಲ್ಲಿ “ಮಾದಕ ವಸ್ತು ಜಾಗೃತಿ ಕಾರ್ಯಕ್ರಮ” ಹಮ್ಮಿಕೊಂಡಿದ್ದು, ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ರವರು ಶಾಲಾ ಮಕ್ಕಳಿಗೆ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿದರು.
ಈ ವೇಳೆ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಮಾತನಾಡಿ, “ಡ್ರಗ್ ಮುಕ್ತ ಕರ್ನಾಟಕ” (Drug Free Karnataka) ಮಾಡುವ ನಿಟ್ಟಿನಲ್ಲಿ ಶಾಲಾ ಶಿಕ್ಷಕರಿಗೆ ಮತ್ತು ಸಾರ್ವಜನಿಕರಿಗೆ ಕೂಡಲೇ ಗೂಗಲ್ ಪ್ಲೇ ಸ್ಟೋರ್ ಮೂಲಕ “Drug Free Karnataka” ಆಪ್ ಡೌನ್ಲೋಡ್ ಮಾಡಿಕೊಂಡು ತಮ್ಮ ಸುತ್ತಮುತ್ತಲಿನಲ್ಲಿ ಮಾದಕ ವಸ್ತುಗಳ ಸೇವನೆ, ಬಳಕೆ, ಮಾರಾಟ ಹಾಗೂ ಬೆಳೆಯುವವರ ಬಗ್ಗೆ ಈ ಆಪ್ ಮೂಲಕ ಮಾಹಿತಿಯನ್ನು ನೀಡಬಹುದು, ತಮ್ಮ ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದರು.
ನಂತರ ಮಾದಕ ವಸ್ತು ವಿರೋಧಿ ಜಾಗೃತಿ ಬಗ್ಗೆ ಶಾಲಾ ಮಕ್ಕಳು ಹೊಸಹಳ್ಳಿ ಬಸ್ ನಿಲ್ದಾಣ ಮತ್ತು ಸರ್ಕಲ್ ಬಳಿ ಘೋಷಣೆಗಳನ್ನು ಕೂಗುವ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
ಡ್ರಗ್ ಫ್ರೀ ಕರ್ನಾಟಕ ಹಾಗೂ ಮಾದಕ ವಸ್ತು ಜಾಗೃತಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ನೀಡಲಾಯಿತು.
ಈ ವೇಳೆ ಶಿಕ್ಷಕರು, ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಇತರರು ಇದ್ದರು…