ರಸ್ತೆ ಬದಿಯಲ್ಲಿ ಸಾಗುತ್ತಿದ್ದ ಮಹಿಳೆಯರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ತಾಲೂಕಿನ ಬೊಮ್ಮವಾರ ಗ್ರಾಮದಲ್ಲಿ ನಡೆದಿದೆ…
ತಿಮ್ಮಕ್ಕ(60), ಯಶೋಧ(33) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು..
ಬೊಮ್ಮವಾರ ಗ್ರಾಮದ ಇಬ್ಬರು ಮಹಿಳೆಯರು ಜಾನುವಾರುಗಳಿಗೆ ಹುಲ್ಲು ತರಲು ಹೋಗಿದ್ದ ವೇಳೆ ಘಟನೆ ನಡೆದಿದೆ… ರಸ್ತೆ ಎಡ ಭಾಗದದಲ್ಲಿ ನಡೆಯುತ್ತಿದ್ದ ವೇಳೆ ವೇಗವಾಗಿ ಹಿಂಬದಿಯಿಂದ ಬಂದ ಕಾರು ಮಹಿಳೆಯರಿಗೆ ಡಿಕ್ಕಿ ಹೊಡೆದಿದೆ…
ಡಿಕ್ಕಿ ಹೊಡೆದು ಮುಂದಿದ್ದ ಕಾಂಪೌಂಡ್ ಗೆ ಕಾರು ಡಿಕ್ಕಿ ಹೊಡೆದಿದೆ. ಕಾರಿನ ಮುಂಬಾಗ ಸಂಪೂರ್ಣ ಜಖಂಗೊಂಡಿದೆ.
ಮೃತಪಟ್ಟ ಮಹಿಳೆಯರಿಗೆ ಪರಿಹಾರಕ್ಕಾಗಿ ಕುಟುಂಬಸ್ಥರು ಹಾಗೂ ಸ್ಥಳೀಯರು ಒತ್ತಾಯಿಸಿದ್ದಾರೆ.
ಮೃತಪಟ್ಟವರನ್ನೇ ನಂಬಿ ಜೀವನ ನಡೆಸುತ್ತಿದ್ದ ಕುಟುಂಬಸ್ಥರು ಬೀದಿ ಪಾಲಾಗಿದ್ದಾರೆ. ಅಪಘಾತ ಸಂಬಂಧ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.