ನಾಡಪ್ರಭು ಕೆಂಪೇಗೌಡರ 516ನೇ ಜನ್ಮ ದಿನಾಚರಣೆಯ ಅಂಗವಾಗಿ ಇಂದು ಬೆಳಗ್ಗೆ ನಗರದ ಕೋರ್ಟ್ ಆವರಣದಲ್ಲಿರುವ ದೊಡ್ಡಬಳ್ಳಾಪುರ ವಕೀಲರ ಸಂಘದ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಸಂಘದ ಕಚೇರಿಯಲ್ಲಿ ಕೆಂಪೇಗೌಡರ ಪ್ರತಿಮೆ ಹಾಗೂ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಲಾಯಿತು.
ದೊಡ್ಡಬಳ್ಳಾಪುರ ವಕೀಲರ ಸಂಘದ ಅಧ್ಯಕ್ಷ ರವಿ ಮಾವಿನಕುಂಟೆ, ಪ್ರಧಾನ ಕಾರ್ಯದರ್ಶಿ ಎ.ಕೃಷ್ಣಮೂರ್ತಿ, ಖಜಾಂಚಿ ಎಂ ಮುನಿರಾಜು, ಜಂಟಿಕಾರ್ಯದರ್ಶಿ ವಿಜಯ್ ಕುಮಾರ್, ಸಯ್ಯದ್ ನಾಸಿಮ್, ಮುಮ್ತಾಜ್, ಪ್ರವೀಣ್ ಕುಮಾರ್ ಗುಪ್ತ, ವಕೀಲೆ, ವರದಿಗಾರರಾದ ಅನುಪಮ ಹಾಗೂ ಇತರೆ ವಕೀಲರು ಇದ್ದರು.