ದೊಡ್ಡಬಳ್ಳಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಸೈಯಿದಾ ಅನೀಸ್ ಅವರು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.
ಸದ್ಯ ದೊಡ್ಡಬಳ್ಳಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಇನ್ನೂ ಯಾರನ್ನೂ ನೇಮಕ ಮಾಡಲಾಗಿರುವುದಿಲ್ಲ.
ಇಂದು ಒಂದೇ ದಿನ ಸುಮಾರು 21 ಮಂದಿ ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಹಾಗೂ ತತ್ಸಮಾನ ವೃಂದದ ಅಧಿಕಾರಿಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ವರ್ಗಾವಣೆ ಮಾಡಿದೆ.