
ಮಂಡ್ಯ ಜಿಲ್ಲೆಯ ಬಳಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ. ಘಟನೆ ಮಂಡ್ಯದ ಗೌಡಹಳ್ಳಿ ಟಿಎಂ ಹೊಸೂರು ಬಳಿಯ ಬೆಂ-ಮೈ ಎಕ್ಸ್‌ಪ್ರೆಸ್ ಹೈವೆಯಲ್ಲಿ ನಡೆದಿದೆ.
ಮೈಸೂರಿನಿಂದ ಬೆಂಗಳೂರಿಗೆ ಹೋಗುವಾಗ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿಗೆ ಗಾಯಗಳಾಗಿವೆ.

ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಡಿ.ಕೆ.ಶಿವಕುಮಾರ್ ಬೆಂಗಳೂರಿಗೆ ಪ್ರಯಾಣ ಮುಂದುವರೆಸಿದ್ದಾರೆ.
ಡಿಕೆ ಶಿವಕುಮಾರ್ ಅವರಿದ್ದ ಕಾರು ಹಿಂದೆಯೇ ಇದ್ದ ಕಾರಣ ಅವರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ಹೇಳಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಟ್ರಾಫಿಕ್ ಸುಗಮಗೊಳಿಸಿದ್ದಾರೆ.