
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ನಟ ದರ್ಶನ್ ಸೇರಿದಂತೆ ಎಲ್ಲಾ ಏಳು ಆರೋಪಿಗಳ ಜಾಮೀನನ್ನು ರದ್ದುಪಡಿಸಿ ಆದೇಶ ಮಾಡಿದೆ.
ಅಲ್ಲದೇ ಎಲ್ಲಾ ಆರೋಪಿಗಳು ಕೂಡಲೇ ಶರಣಾಗುವಂತೆ ಕೋರ್ಟ್ ಸೂಚಿಸಿದೆ. ಶರಣಾಗದಿದ್ದರೆ ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಖಡಕ್ ಸೂಚನೆ ನೀಡಿದೆ.
ಈ ಹಿನ್ನೆಲೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತೆ ಬಂಧನಕ್ಕೆ ಒಳಗಾಗಿದ್ದಾರೆ. ಬೆಂಗಳೂರಿನ ಆರ್‌ಆರ್ ನಗರ ನಿವಾಸಕ್ಕೆ ತೆರಳಿದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ