
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ನಟ ದರ್ಶನ್ ಸೇರಿದಂತೆ ಎಲ್ಲಾ ಏಳು ಆರೋಪಿಗಳ ಜಾಮೀನನ್ನು ರದ್ದುಪಡಿಸಿ ಆದೇಶ ಮಾಡಿದೆ.
ಅಲ್ಲದೇ ಎಲ್ಲಾ ಆರೋಪಿಗಳು ಕೂಡಲೇ ಶರಣಾಗುವಂತೆ ಕೋರ್ಟ್ ಸೂಚಿಸಿದೆ. ಶರಣಾಗದಿದ್ದರೆ ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಖಡಕ್ ಸೂಚನೆ ನೀಡಿದೆ.
ಈ ಹಿನ್ನೆಲೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತೆ ಬಂಧನಕ್ಕೆ ಒಳಗಾಗಿದ್ದಾರೆ. ಬೆಂಗಳೂರಿನ ಆರ್‌ಆರ್ ನಗರ ನಿವಾಸಕ್ಕೆ ತೆರಳಿದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.
ಇದೀಗ ನಟ ದರ್ಶನ್ ಅವರನ್ನು ಕೂಡ ಬಂಧಿಸಲಾಗಿದೆ…. ಹೊಸಕೆರೆಹಳ್ಳಿಯಲ್ಲಿರುವ ವಿಜಯಲಕ್ಷ್ಮಿ ಫ್ಲ್ಯಾಟ್ ನಲ್ಲಿ ಬಂಧಿಸಲಾಗಿದೆ…
ಪ್ರೆಸ್ಟೀಜ್ ಸೌತ್ ರಿಡ್ಜ್ ಅಪಾರ್ಟ್ಮೆಂಟ್ ನ 15ನೇ ಮಹಡಿಯಲ್ಲಿದ್ದ ದರ್ಶನ್ ನನ್ನು ಅರೆಸ್ಟ್… ಮಾಡಲಾಗಿದೆ…
ಬಂಧನ ಮಾಡಿ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಗೆ ಕರೆದೊಯ್ದ ಪೊಲೀಸರು
ಮುಖಕಕ್ಕೆ ಮಾಸ್ಕ್ ಹಾಕಿಕೊಂಡ ಪೊಲೀಸ್ ಜೀಪ್ ಹತ್ತಿ ಪೊಲೀಸ್ ಠಾಣೆಗೆ ಹೊರಟ ಕೊಲೆ ಆರೋಪಿ ದರ್ಶನ್