ಧರ್ಮಸ್ಥಳ ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು (ಎಸ್ಐಟಿ) ಸಾಕ್ಷಿದಾರ ಮಾಸ್ಕ್ಮ್ಯಾನ್ ನನ್ನು ಬಂಧನ ಮಾಡಲಾಗಿದೆ. ಧರ್ಮಸ್ಥಳದಲ್ಲಿ ಎಸ್ಐಟಿ ಮುಖ್ಯಸ್ಥರ ಉಪಸ್ಥಿತಿಯಲ್ಲಿಯೇ ವಶಕ್ಕೆ ಪಡೆಯಲಾಗಿದೆ. ಇದರಿಂದ ಧರ್ಮಸ್ಥಳದಲ್ಲಿ ಶವಗಳ ಸಾಮೂಹಿಕ ಹೂತಿಟ್ಟ ಪ್ರಕರಣಕ್ಕೆ ಹೊಸ ತಿರುವು ಸಿಗುತ್ತಿದೆ.
ಧರ್ಮಸ್ಥಳ ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರನು ತೋರಿಸಿದ 20 ಕ್ಕೂ ಹೆಚ್ಚು ಕಡೆಗಳಲ್ಲಿ ಎಸ್ಐಟಿ ತಂಡವು ಕಳೆದ ಒಂದು ತಿಂಗಳಿಂದ ಹುಡುಕಾಟ ನಡೆಸಿತು. ಕಳೆದ ಒಂದು ವಾರದಿಂದ ಸಾಕ್ಷಿದಾರರನ್ನು ವಿಚಾರಣೆ ನಡೆಸುತ್ತಿದೆ. ಶನಿವಾರ ಬೆಳಗಿನ ಜಾವದವರೆಗೂ ವಿಚಾರಣೆ ನಡೆಸಿ ಬಳಿಕ ಬಂಧಿಸುವ ನಿರ್ಧಾರಕ್ಕೆ ಬಂದಿದೆ.
ದೂರುದಾರ ಹೇಳಿದ ಪ್ರಕರಣ ಸಂಪೂರ್ಣ ಸುಳ್ಳು ಎಂದು ತನಿಖೆಯಿಂದ ಬೆಳಕಿಗೆ ಬಂದ ಕಾರಣ ಅಂತಿಮವಾಗಿ ದೂರುದಾರನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ ಎನ್ನಲಾಗಿದೆ.