ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಶೈಕ್ಷಣಿಕ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲ್ಲೂಕು, ಗಿಡ್ಡಪ್ಪನಹಳ್ಳಿ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ|| ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ(ಸಿ.ಬಿ.ಎಸ್.ಇ)ಯಲ್ಲಿ ಪ್ರಥಮ ಪಿ.ಯು.ಸಿ ಸಹ ಶಿಕ್ಷಣ 60 ಸಂಖ್ಯಾಬಲ (ಪಿ.ಸಿ.ಎಂ.ಬಿ) ತರಗತಿಗೆ ಪ್ರವೇಶ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸದರಿ ವಸತಿ ಶಾಲೆಯಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಮತ್ತು ಸಿಖ್) ವಿದ್ಯಾರ್ಥಿಗಳಿಗೆ ಶೇ.75%ರಷ್ಟು ಹಾಗೂ ಇತರೆ ವರ್ಗಗಳ ಪ.ಜಾತಿ, ಪ.ಪಂಗಡ ಮತ್ತು ಇತರೆ ಹಿಂದುಳಿದ ವಿದ್ಯಾರ್ಥಿಗಳಿಗೆ ಶೇ.25%ರಷ್ಟು ಸ್ಥಾನ, ವಿಕಲಚೇತನರಿಗೆ ಶೇ.3ರಷ್ಟು ಪ್ರವೇಶ ಮೀಸಲಿರಿಸಿದೆ.
ಅಲ್ಪಸಂಖ್ಯಾತರ ಯಾವುದೇ ವಸತಿ ಶಾಲೆ/ಸರ್ಕಾರಿ/ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ಅಧ್ಯಯನ ಮಾಡಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಅರ್ಹರಿರುತ್ತಾರೆ. ದಾಖಲಾದ ವಿದ್ಯಾರ್ಥಿಗಳಿಗೆ ಉಚಿತ ವಸತಿ, ಶಿಕ್ಷಣ, ಪಠ್ಯ ಪುಸ್ತಕ, ಆಹಾರ, ಸಮವಸ್ತ್ರ, ಶುಚಿ ಸಂಭ್ರಮ ಕಿಟ್, ಲೇಖನ ಸಾಮಗ್ರಿ ಸೇರಿದಂತೆ ಇತರೆ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುವುದು.
ತಾಂತ್ರಿಕ ಮತ್ತು ವೈದ್ಯಕೀಯ ಮತ್ತು ಇತ್ಯಾದಿ ವೃತ್ತಿಪರ ಶಿಕ್ಷಣಕ್ಕೆ ಅನುಕೂಲವಾಗಲು ವಿಜ್ಞಾನ ವಿಷಯಗಳಿಗೆ PCMB ತರಗತಿಗಳನ್ನು ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುವುದು. ವೃತ್ತಿಪರ ಕೋರ್ಸುಗಳ (NETT/JEE(Mains & Advanced)KCET) ಪ್ರವೇಶ ಪರೀಕ್ಷೆಗೆ ವಿಶೇಷ ತರಬೇತಿಯನ್ನು ಉಚಿತವಾಗಿ ನೀಡಲಾಗುವುದು.
ಪ್ರಥಮ ಪಿ.ಯು.ಸಿ ಸಹ ಶಿಕ್ಷಣ (PCMB) ತರಗತಿಗೆ ದಾಖಲಾತಿ ಪ್ರವೇಶಕ್ಕೆ ಅರ್ಜಿಯನ್ನು ಪ್ರಾಂಶುಪಾಲರಿಂದ ಪಡೆದು, ಸಂಬಂಧಪಟ್ಟ ಪ್ರಾಂಶುಪಾಲರು, ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ, ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು ರವರಿಗೆ ದಿನಾಂಕ: 25/05/2023 ರೊಳಗೆ ಅರ್ಜಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಡಾ|| ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ, ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು, ದೂರವಾಣಿ ಸಂಖ್ಯೆ-9632933397, 8660971267, 9972238296, 9980903199. ಅಥವಾ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಛೇರಿ ಮತ್ತು ತಾಲ್ಲೂಕು ಮಾಹಿತಿ ಕೇಂದ್ರ, ಹೊಸಕೋಟೆ. ದೂರವಾಣಿ ಸಂಖ್ಯೆ- ದೂ:080-27931899, ಮೊ.8310397004 ಅಥವಾ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು (ಗ್ರಾ) ಜಿಲ್ಲೆ. ನಂ.216, 2ನೇ ಮಹಡಿ, ಜಿಲ್ಲಾಧಿಕಾರಿಗಳ ಹೊಸ ಸಂಕೀರ್ಣ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-562110. ದೂರವಾಣಿ ಸಂಖ್ಯೆ- 080-29787455. ಅವರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.