ಉಪರಾಷ್ಟ್ರಪತಿ‌ ಚುನಾವಣೆ: ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರಿಗೆ ಭರ್ಜರಿ ಗೆಲುವು

ಮಂಗಳವಾರ ನಡೆದ ಉಪರಾಷ್ಟ್ರಪತಿ‌ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ ಆಗಿದ್ದ ಜಗದೀಪ್ ಧನಕರ್ ಅವರ ಉತ್ತರಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಮಂಗಳವಾರ ನಡೆದ ಚುನಾವಣೆಯಲ್ಲಿ 68 ವರ್ಷದ ಸಿಪಿ ರಾಧಾಕೃಷ್ಣನ್ ಅವರು ಭರ್ಜರಿ ಜಯ ಸಾಧಿಸಿದರು. ಅವರಿಗೆ ಒಟ್ಟು 452 ಪ್ರಥಮ ಪ್ರಾಶಸ್ತ್ಯದ ಮತಗಳು ಲಭಿಸಿದರೆ, ಅವರ ಪ್ರತಿಸ್ಪರ್ಧಿಯಾಗಿದ್ದ ವಿರೋಧ ಪಕ್ಷಗಳ (ಐಎನ್‌ಡಿಐಎ) ಅಭ್ಯರ್ಥಿ ಮತ್ತು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಬಿ. ಸುದರ್ಶನ್ ರೆಡ್ಡಿ ಅವರು 300 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದರು.

ಮತದಾನದ ಅಂಕಿ – ಅಂಶಗಳನ್ನು ನೋಡಿದರೆ ವಿರೋಧ ಪಕ್ಷಗಳಿಂದ ಭಾರೀ ಪ್ರಮಾಣದಲ್ಲಿ ಅಡ್ಡ ಮತದಾನ ನಡೆದಿರುವಂತೆ ಭಾಸವಾಗುತ್ತಿದೆ. ಕನಿಷ್ಠ 19 ಸಂಸದರು ಎನ್‌ಡಿಎ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದ್ದಾರೆ ಎಂದು ಅಂದಾಜಿಸಲಾಗಿದೆ. ಈ ಮೂಲಕ ಸಿಪಿ ರಾಧಾಕೃಷ್ಣನ್ ಅವರು ಸುಲಭವಾಗಿ ಗೆಲುವಿನ ನಗೆಯನ್ನು ಬೀರಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಸಿ.ಪಿ. ರಾಧಾಕೃಷ್ಣನ್ 452 ಮತಗಳಿಂದ ಗೆದ್ದಿದ್ದಾರೆ. ಪ್ರತಿಪಕ್ಷದ ಬಿ. ಸುದರ್ಶನ್ ರೆಡ್ಡಿ 300 ಮತಗಳನ್ನು ಪಡೆದಿದ್ದಾರೆ. ಚಲಾವಣೆಯಾದ 767 ಮತಗಳಲ್ಲಿ 752 ಮಾನ್ಯ, 15 ಅಮಾನ್ಯವಾಗಿದೆ ಎಂದು ಚುನಾವಣಾಧಿಕಾರಿ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!