
ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪಿ. ದಿನೇಶ್ ಅವರ ಜನ್ಮದಿನ ಹಿನ್ನೆಲೆ ತೂಬಗೆರೆ ಯುತ್ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು.
ಪಿ. ದಿನೇಶ್ ಅವರಿಗೆ ಹುಟ್ಟುಹ್ಬದ ಶುಭಾಶಯ ತಿಳಿಸಿ ಮಾತನಾಡಿದ ತೂಬಗೆರೆ ಹೋಬಳಿಯ ಯೂತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಎನ್ ನರಸಿಂಹಮೂರ್ತಿ, ಪಿ. ದಿನೇಶ್ ಅವರು ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಬಂದಾಗಿನಿಂದ ಘಾಟಿ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದಾರೆ… ದೇವಾಲಯದ ಒಳಾಂಗಣ ದುರಸ್ತಿ ಕಾರ್ಯ, ದೇವಾಲಯದ ಆದಾಯದಲ್ಲಿ ಹೆಚ್ಚಳ, ಪ್ಲಾಸ್ಟಿಕ್ ನಿಷೇಧ ಸೇರಿದಂತೆ ಇತರೆ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದರು.
ಈ ವೇಳೆ ಕಾಂಗ್ರೆಸ್ ಹಿರಿಯ ಮುಖಂಡ ಪುರುಷೋತ್ತಮ, ಯುವ ಕಾಂಗ್ರೆಸ್ ಮುಖಂಡರಾದ ವಿನಯ್, ರಾಕೇಶ್, ವಿಶ್ವನಾಥ, ಸೇರಿದಂತೆ ಇತರರು ಉಪಸ್ಥಿತರಿದ್ದರು…