
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎಚ್. ಮುನಿಯಪ್ಪ ರವರು ಇಂದು ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಪುನರ್ ನಿರ್ಮಾಣದ ಕಾಮಗಾರಿ ಹಾಗೂ ಅಲ್ಲಿನ ಕಾರ್ಯಚಟುವಟಿಕೆಗಳ ಕುರಿತು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಘಾಟಿ ಸುಬ್ರಮಣ್ಯ ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ಮಹೇಶ್, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ರಾಜಣ್ಣ, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರವಿ ಸಿದ್ದಪ್ಪ, ಹಾಗೂ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ದಿನೇಶ್, ಹಾಗೂ ಅರ್ಚಕರು ಉಪಸ್ಥಿತರಿದ್ದರು.