
ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಗಾಯಾಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ದೊಡ್ಡಬಳ್ಳಾಪುರ ನಗರದ ಹಾಲಿನ ಡೈರಿ ಸಮೀಪ ಇಂದು ಸಂಜೆ ನಡೆದಿದೆ…
ಗಾಯಾಳು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೈಯಪ್ಪನಹಳ್ಳಿ ಮೂಲದ ನರೇಂದ್ರ (35) ಎಂದು ಗುರುತಿಸಲಾಗಿದೆ…
ಎ1 ಬಿರಿಯಾನಿ ಸೆಂಟರ್ ನಿಂದ ಹಾಲಿನ ಡೈರಿ ಕಡೆಗೆ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬಸವ ಭವನ ಕಡೆಯಿಂದ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ…
ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…