ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನ: ರಾಷ್ಟ್ರೀಯ ಏಕತಾ ದಿನದ ಅಂಗವಾಗಿ‌ ‘ಏಕತಾ ನಡಿಗೆ’ ಓಟಕ್ಕೆ ಚಾಲನೆ: ಡಿಸಿ ಎಸ್ಪಿ ಭಾಗಿ

ದೇಶದ ಪ್ರಪ್ರಥಮ ಗೃಹ ಸಚಿವ, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ‌ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಶುಕ್ರವಾರ ‘ಏಕತಾ ನಡಿಗೆ’ ಓಟ ನಡೆಯಿತು.

ತಾಲೂಕಿನ ಗೀತಂ ಯೂನಿವರ್ಸಿಟಿಯಲ್ಲಿ ಏಕತಾ ನಡಿಗೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ‌.ಕೆ.ಬಾಬಾ ಅವರು ಪ್ರಮಾಣ ವಚನ‌ ಬೋಧಿಸಿ, ಹಸಿರು ನಿಶಾನೆ‌ ತೋರಿ ಚಾಲನೆ ನೀಡಿದರು.

ಬಳಿಕ ಪೊಲೀಸರು, ಎನ್.ಸಿ.ಸಿ ಕೆಡೆಟ್ ಗಳು, ವಿದ್ಯಾರ್ಥಿಗಳು, ಸ್ಕೌಟ್ಸ್ ಹಾಗೂ ಗೈಡ್ಸ್ ವಿದ್ಯಾರ್ಥಿಗಳು, ಸಾರ್ವಜನಿಕರು ಏಕತಾ ನಡಿಗೆಯಲ್ಲಿ ಹೆಜ್ಜೆ ಹಾಕಿದರು.

ಗೀತಂ ಯೂನಿವರ್ಸಿಟಿಯಿಂದ ಆರಂಭವಾದ ನಡಿಗೆಯು ನಾಗದೇನಹಳ್ಳಿ ತಲುಪಿ ನಡಿಗೆ ಸಂಪನ್ನಗೊಂಡಿತು.

ಈ ವೇಳೆ ಎಎಸ್ಪಿ ನಾಗರಾಜು, ಡಿವೈಎಸ್ಪಿ ರವಿ.ಪಿ, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ, ಮಹಿಳಾ ಠಾಣಾ ಇನ್ಸ್ ಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ, ಪೊಲೀಸ್ ಚಂದ್ರಶೇಖರ್, ಗೀತಂ ಯೂನಿವರ್ಸಿಟಿ ಆಡಳಿತ ಮಂಡಳಿ, ಸಿಬ್ಬಂದಿ, ಉಪನ್ಯಾಸಕರು ವಿವಿಧ ಠಾಣೆಗಳ ಪೊಲೀಸರು, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!