ಟೆಂಪೋ ಹಾಗೂ ಕ್ಯಾಂಟರ್ ನಡುವೆ ಅಪಘಾತವಾಗಿರುವ ಘಟನೆ ತಾಲೂಕಿನ ನಾಗದೇನಹಳ್ಳಿ ಬಳಿ ನಡೆದಿದೆ. ಡಿಕ್ಕಿ ರಭಸಕ್ಕೆ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಮಹಾರಾಷ್ಟ್ರ ನೋಂದಣಿಯ ಕ್ಯಾಂಟರ್, ಕರ್ನಾಟಕ ನೋಂದಣಿಯ ಟೆಂಪೋ ನಡುವಿನ ಅಪಘಾತದಲ್ಲಿ ಚಾಲಕರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.