
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಪಂಚವಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕಂಪ್ಯೂಟರ್ ಗಳು ಮತ್ತು ಪ್ರಿಂಟರ್ ಗಳನ್ನು ಕಳ್ಳತನ ಮಾಡಲಾಗಿತ್ತು.
ಕಂಪ್ಯೂಟರ್ ಗಳು ಮತ್ತು ಪ್ರಿಂಟರ್ ಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದ್ದು, ಬಂಧಿತನಿಂದ ಸುಮಾರು 5 ಲಕ್ಷ ಹತ್ತು ಸಾವಿರ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ….