
ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ (DYSP) ರವಿ.ಪಿ ಅವರನ್ನು ವರ್ಗಾವಣೆ ಮಾಡಿದ್ದು, ನೂತನ ಡಿವೈಎಸ್ಪಿಯಾಗಿ ಪಾಂಡುರಂಗ ಎಸ್ ಅವರನ್ನು ನೇಮಕ ಮಾಡಲಾಗಿದೆ.
ಈ ಹಿನ್ನೆಲೆ ಇಂದು ದೊಡ್ಡಬಳ್ಳಾಪುರ ಡಿವೈಎಸ್ ಪಿ ಕಚೇರಿಯಲ್ಲಿ ನೂತನ ಡಿವೈಎಸ್ಪಿಯಾಗಿ ಪಾಂಡುರಂಗ ಎಸ್ ಅವರು ಅಧಿಕಾರ ಸ್ವೀಕರಿಸಿದರು.
ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ (DYSP) ರವಿ ಪಿ ಅವರನ್ನು ಸಿಐಡಿ ವಿಭಾಗಕ್ಕೆ ವರ್ಗಾವಣೆ ಮಾಡಿ ಪೊಲೀಸ್ ಮಹಾನಿರೀಕ್ಷಕರ ಪರವಾಗಿ ಸೌಮೇಂದು ಮುಖರ್ಜಿ ಅವರು ಆದೇಶ ಹೊರಡಿಸಿದ್ದಾರೆ.
ಇವರ ಸ್ಥಾನಕ್ಕೆ ಲೋಕಾಯುಕ್ತ ವಿಶೇಷ ತನಿಖಾ ತಂಡದ ಪಾಂಡುರಂಗ ಎಸ್ ಅವರನ್ನು ನೇಮಿಸಲಾಗಿತ್ತು.