
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸಲ್ಮಾನರು ಸಾಮೂಹಿಕ ಪ್ರಾರ್ಥನೆ ನಡೆಸಿದ್ದಾರೆ.
ಏರ್ಪೋಟ್ ಟರ್ಮಿನಲ್ 2 ರಲ್ಲಿ ಮುಸಲ್ಮಾನರಿಂದ ಸಾಮೂಹಿಕ ಪ್ರಾರ್ಥನೆ ನಡೆದಿದೆ.
ಇದೀಗ ಸಾರ್ವಜನಿಕ ಸ್ಥಳದಲ್ಲಿ ಸಾಮೂಹಿಕ ನಮಾಜ್ ಮಾಡಿದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಸಾರ್ವಜನಿಕರ ಸ್ಥಳದಲ್ಲಿ ಸಾಮೂಹಿಕ ನಮಾಜ್ ಮಾಡಿದ್ರು ಏರ್ಪೋಟ್ ಸಿಬ್ಬಂದಿ, ಭದ್ರತಾ ಪಡೆ ಸುಮ್ಮನೆ ನಿಂತಿದೆ ಅಂತ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಏರ್ಪೋಟ್ ಒಳ ಭಾಗದಲ್ಲಿ ಪ್ರಯಾಣಿಕರಿಗೆ ಪ್ರಾರ್ಥನಾ ಕೊಠಡಿಯಿದ್ರು ಹೊರಗಡೆ ನಮಾಜ್ ಮಾಡಲಾಗಿದೆ ಎಂದು ನೆಟ್ಟಿಗರು ಗರಂ ಆಗಿದ್ದಾರೆ.
ಮೆಕ್ಕಾಗೆ ತೆರಳುತ್ತಿದ್ದವರನ್ನ ಬೀಳ್ಕೊಡಲು ಬಂದಿದ್ದವರು ಮಾಡಿದ್ದ ನಮಾಜ್ ಮಾಡಿದ್ದಾರೆ ಎನ್ನಲಾಗಿದೆ.
ಇದೀಗ ನಮಾಜ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.