
ದೊಡ್ಡಬಳ್ಳಾಪುರ : ಕ್ರೀಡೆಯಿಂದ ಶಿಸ್ತು, ಸಂಯಮ ಮತ್ತು ಆರೋಗ್ಯ ವೃದ್ಧಿಸುತ್ತದೆ, ಕ್ರೀಡೆಯಲ್ಲಿ ಗೆಲ್ಲಲು ಉತ್ತಮ ತರಬೇತಿ ಅಗತ್ಯ, ಪರಿಣತಿಯನ್ನು ಗಳಿಸಲು ಸತತ ಸಾಧನೆ ಮಾಡಬೇಕು ಎಂದು ಆರ್. ಎಲ್. ಜೆ. ಐ.ಟಿ ಯ ಸಂಶೋಧನಾ ವಿಭಾಗದ ಸಂಚಾಲಕರಾದ ಡಾ. ಶ್ರೀನಿವಾಸ ರೆಡ್ಡಿ ಹೇಳಿದರು.
ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು
ಕ್ರೀಡೆ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಈ ಮೂಲಕ ಧೈರ್ಯ ಮತ್ತು ಸಾಹಸ ಗುಣಗಳು ವೃದ್ಧಿಸುತ್ತದೆ, ಕ್ರೀಡಾಕ್ಷೇತ್ರವು ಇಚ್ಛಾಶಕ್ತಿ, ಏಕಾಗ್ರತೆ ಮತ್ತು ಸ್ಪರ್ಧಾ ಮನೋಭಾವವನ್ನು ಬೆಳೆಸುತ್ತದೆ ಎಂದರು.
ಸಂಜೆ ಕಾಲೇಜು ಪ್ರಾಂಶುಪಾಲ ಡಾ. ಎಂ ಚಿಕ್ಕಣ್ಣ ಮಾತನಾಡಿ ಮಾನಸಿಕ ಹಾಗೂ ಸದೃಢತೆಗೆ ಕ್ರೀಡೆ ಮುಖ್ಯವಾಗಿದ್ದು ಸೋಲು ಗೆಲುವಿನ ಕುರಿತು ಚಿಂತಿಸದೆ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳಬೇಕು ಯುವಕರು ಕ್ರೀಡೆಗಳಲ್ಲಿ ತೊಡಗಿಸಿ ಕೊಂಡರೆ ಶಾರೀರಿಕ ಹಾಗೂ ಮಾನಸಿಕ ವಿಕಸನ ಸಾಧ್ಯ ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕ ಅಧ್ಯಯನಕ್ಕೆ ಮಾತ್ರ ಸೀಮಿತರಾಗಬಾರದು ಕ್ರೀಡೆಯಲ್ಲೂ ಸಾಧನೆ ಮಾಡಬಹುದು ,
ನಿರಂತರವಾದ ಕಠಿಣ ಪ್ರಯತ್ನದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ, ಸೋಲು ಕೊನೆಯಲ್ಲ. ಸೋಲೇ ಗೆಲುವಿನ ಸೋಪಾನ, ಕ್ರೀಡಾಪಟುಗಳಿಗೆ ಉಜ್ವಲ ಭವಿಷ್ಯವಿದೆ ಎಂದರು.
ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಕೆ. ದಕ್ಷಿಣಾಮೂರ್ತಿ, ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀನಿವಾಸ್ ಎಸ್,ಉದ್ಯೋಗ ಮತ್ತು ತರಬೇತಿ ವಿಭಾಗದ ಮುಖ್ಯಸ್ಥರಾದ ಬಾಬುಸಾಬಿ, ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರಾದ, ಮಧುಶ್ರೀ, ನಂದನ ಪ್ರಾಧ್ಯಾಪಕರಾದ ಡಾ. ತಾವರೇ ನಾಯಕ್, ಕಿರಣ್,ನಯನ ಭಾನುಶ್ರೀ ಮತ್ತಿತರರು ಹಾಜರಿದ್ದರು.