ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ ಅಕ್ರಮವಾಗಿ ಮಾದಕವಸ್ತು ಸಾಗಿಸುತ್ತಿದ್ದ 10 ಮಂದಿ ಪ್ರಯಾಣಿಕರನ್ನು ಬಂಧಿಸಲಾಗಿದೆ.

ಯೆಸ್, ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಳೆದ 18 ದಿನಗಳಲ್ಲಿ ನಡೆಸಿದ ತಪಾಸಣೆಯಲ್ಲಿ ಸುಮಾರು 14.22 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾ, ಇ-ಸಿಗರೇಟ್ ವಶಪಡಿಸಿಕೊಂಡಿದಾರೆ.

ಅಧಿಕಾರಿಗಳ ಮಾಹಿತಿಯಂತೆ, ಬ್ಯಾಂಕಾಕ್ ಸೇರಿದಂತೆ ವಿದೇಶದ ಹಲವು ನಗರಗಳಿಂದ ಬಂದ ಪ್ರಯಾಣಿಕರು ತಮ್ಮ ಬ್ಯಾಗ್‌ಗಳಲ್ಲಿ 38.64 ಕೆ.ಜಿ ಹೈಡ್ರೋಪೋನಿಕ್ಸ್ ಗಾಂಜಾ, 2.38 ಲಕ್ಷ ರೂ. ಮೌಲ್ಯದ ವಿದೇಶಿ ಇ-ಸಿಗರೇಟ್‌ಗಳು ಹಾಗೂ ಎಂಟು ಬಗೆಯ ಅಪರೂಪದ ಜೀವಂತ ಪ್ರಾಣಿಗಳನ್ನು ಸಾಗಿಸುತ್ತಿದ್ದರೆಂದು ಗೊತ್ತಾಗಿದೆ. ಏರ್ಪೋರ್ಟ್ ನ ಪ್ರಯಾಣಿಕರ ತಪಾಸಣೆ ಸಂದರ್ಭದಲ್ಲಿ ಸಂಶಯಾಸ್ಪದ ಬ್ಯಾಗ್‌ಗಳನ್ನು ಸ್ಕ್ಯಾನಿಂಗ್ ಮಾಡಿದಾಗ ಈ ಅಕ್ರಮ ವಸ್ತುಗಳು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಕಸ್ಟಮ್ಸ್ ಅಧಿಕಾರಿಗಳು ಕಸ್ಟಮ್ಸ್ ಆಕ್ಟ್ ಮತ್ತು ಸಂಬಂಧಿತ ಕಾನೂನುಗಳಡಿ ಪ್ರಕರಣ ದಾಖಲಿಸಿ, ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!