
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನಡೆದ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ದೊಡ್ಡಬಳ್ಳಾಪುರ ನ್ಯಾಯಾಲಯದಲ್ಲಿಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು, ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ದೂರವಾಗಿದ್ದ ಗಂಡ ಹೆಂಡತಿ ರಾಜೀ ಸಂಧಾನದ ಮೂಲಕ ನ್ಯಾಯಾಧೀಶರ ಮುಂದೆ ಒಂದಾದರು.
ಬಿರುಕುಗೊಂಡು ದೂರವಾಗಿದ್ದ ದಂಪತಿ ಮತ್ತೆ ಒಂದಾದರು, ವಿವಾಹ ವಿಚ್ಛೇದನಕ್ಕೆ ಮುಂದಾಗಿದ್ದ ಎರಡು ಜೋಡಿಗಳ ಮನಸ್ಸುನ್ನು ಬದಲಾಯಿಸಿ ನೂತನ ಜೀವನಕ್ಕೆ ಕಾಲಿಡುವಂತೆ ನ್ಯಾಯಾಧೀಶರು ಮನಮೋಲಿಸಿದರು.
ನೂತನ ವಧು- ವರರಂತೆ ಹೂಮಾಲೆಗಳನ್ನು ಪರಸ್ಪರ ಹಾಕಿಕೊಳ್ಳುವ ಮೂಲಕ ಸತಿ-ಪತಿ ಒಂದಾದರು, ಒಂದಾದ ಎರಡು ಜೋಡಿಗಳಿಗೆ ಪರಸ್ಪರ ಸಿಹಿ ತಿನ್ನಿಸುವ ಮೂಲಕ ಸಂಭ್ರಮಿಸಿದ ಘಟನೆ ಕೋರ್ಟ್ ನಲ್ಲಿ ನಡೆದಿದೆ.
ಈ ದಂಪತಿ ಹಿರಿಯ ಪ್ರಧಾನ ನ್ಯಾಯಾಧೀಶರಾದ ಶಿಲ್ಪಾ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್, 2ನೇ ಸಿವಿಲ್ ನ್ಯಾಯಾಧೀಶರಾದ ರವಿ ಬೇಟೆಗಾರ್ ರವರ ಉಪಸ್ಥಿತಿಯಲ್ಲಿ ಪುನಃ ತಮ್ಮ ದಾಂಪತ್ಯ ಜೀವನಕ್ಕೆ ಮರಳಿದರು.
ಈ ವೇಳೆ ವಕೀಲರು ಹಾಗೂ ಇತರರು ಮತ್ತೆ ಒಂದಾದ ಜೋಡಿಗಳಿಗೆ ಶುಭ ಹಾರೈಸಿದರು.