
2026ರ ಫೆಬ್ರವರಿ – ಮಾರ್ಚ್ ನಲ್ಲಿ ನಡೆಯಲಿರುವ ಪುರುಷರ ಟಿ20 ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಗಾಗಿ ಭಾರತೀಯ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ.

ಮುಂಬೈನಲ್ಲಿರುವ ಭಾರತೀಯ ಕ್ರಿಕೆಟ್ ತಂಡದ (ಬಿಸಿಸಿಐ) ಕೇಂದ್ರ ಕಚೇರಿಯಲ್ಲಿ ಡಿ. 20ರಂದು ನಡೆದ ತಂಡದ ಆಯ್ಕೆ ಮಂಡಳಿ ಸಭೆಯಲ್ಲಿ ತಂಡದ ಆಯ್ಕೆಯನ್ನು ಮಾಡಲಾಯಿತು.

ಟೀಂ ವಿವರ
ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಸರ್ ಪಟೇಲ್ (ಉಪ ನಾಯಕ), ರಿಂಕು ಸಿಂಗ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್.