
ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಕ್ರಾಸ್ ಬಳಿ ನಿನ್ನೆ ರಾತ್ರಿ ಸುಮಾರು 11.30ರ ಸುಮಾರಿಗೆ ಯೂ ಟರ್ನ್ ಮಾಡುತ್ತಿದ್ದ ಕಂಟೈನರ್ ಗೆ ಬೈಕ್ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ನಲ್ಲಿದ್ದ ಇಬ್ಬರಲ್ಲಿ ಒಬ್ಬ ಇಸ್ತೂರು ಗ್ರಾಮದ ಲೋಕೇಶ್ (38) ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಶ್ಯಾಕಲನದೇವಿಪುರ ಗ್ರಾಮದ 38 ವರ್ಷದ ದೃವಂತ್ ಕುಮಾರ್ ಗಂಭೀರ ಗಾಯಗೊಂಡಿದ್ದಾನೆ.
ಗಾಯಾಳುಗೆ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರಾತ್ರಿಯೇ ದೊಡ್ಡಬೆಳವಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಂಟೈನರ್ ನ್ನು ವಶಕ್ಕೆ ಪಡೆದ ಪೊಲೀಸರು, ಪ್ರಕರಣ ದಾಖಲಾಸಿಕೊಂಡಿದ್ದಾರೆ.
ಮೃತ ಲೋಕೇಶ್ ನೆಲಮಂಗದಲ್ಲಿ ದಿನಸಿ ಅಂಗಡಿ ಇಟ್ಟುಕೊಂಡಿದ್ದ, ವ್ಯಾಪಾರ ಮುಗಿಸಿ ಸ್ನೇಹಿತನ ಜೊತೆ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಮೃತ ಲೋಕೇಶ್ ಗೆ ಪತ್ನಿ, ಒಂದೂವರೆ ವರ್ಷ ಹಾಗೂ 3 ವರ್ಷದ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….