
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ಸೌಲಭ್ಯ ಹಾಗೂ ಸಮಸ್ಯೆ ಕುರಿತು ಪರಿಶೀಲಿಸಿದರು.
ಮೊದಲಿಗೆ ಆಸ್ಪತ್ರೆ ಹೊರ ಮತ್ತು ಒಳ ರೋಗಿಗಳ ಕೊಠಡಿ, ಆಸ್ಪತ್ರೆ ಆವರಣದಲ್ಲಿನ ಸ್ವಚ್ಛತೆ, ವೈದ್ಯರ ಸೇವೆ, ಆಸ್ಪತ್ರೆಯಲ್ಲಿ ದೊರೆಯುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು. ಬಳಿಕ ಪ್ರಯೋಗಾಲಯ, ಔಷಧಾಲಯ, ಶಸ್ತ್ರಚಿಕಿತ್ಸಾ ಕೊಠಡಿ, ಮಹಿಳಾ ವಾರ್ಡ್ ಸೇರಿ ವಿವಿಧ ವಿಭಾಗಗಳಿಗೆ ಭೇಟಿ ನೀಡಿ, ರೋಗಿಗಳನ್ನು ವಿಚಾರಿಸಿ, ಮಾಹಿತಿ ಪಡೆದರು.
ಈ ವೇಳೆ ಆಸ್ಪತ್ರೆ ವೈದ್ಯಾಧಿಕಾರಿ, ಆಡಳಿತಾಧಿಕಾರಿ, ವೈದ್ಯರು, ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು….