
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ ಇಂದು ಬೆಳಗ್ಗೆ ನಡೆದಿದೆ.
ಸಣ್ಣ ಪುಟ್ಟ ಗಾಯಗಳೊಂದಿಗೆ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಕತ್ತಾಳೆಪಾಳ್ಯ ಗ್ರಾಮದ ತರಕಾರಿ ವ್ಯಾಪಾರಿ ಹನುಮಂತರಾಜು ಎಂಬುವವರು ನೆಲಮಂಗಲದ ಹುಸ್ಕೂರು ಸಮೀಪದ ಆರ್.ಎಂ.ಸಿ ಯಿಂದ ವ್ಯಾಪಾರ ಮಾಡಲು ತರಕಾರಿ ತರುತ್ತಿದ್ದಾಗ ಹೊನ್ನಾವರ ಗೇಟ್ ಬಳಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿಬಿದ್ದಿದೆ.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…