
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ ಇಂದು ಸಂಜೆ ನಡೆದಿದೆ….

ಮೆಣಸಿ ಗೇಟ್ ಬಳಿ ಹಾದುಹೋಗಿರುವ ದಾಬಸ್ ಪೇಟೆ – ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರುವು ಪಡೆಯುತ್ತಿದ್ದ ಜೆಸಿಬಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ..

ಘಟನೆ ನಡೆದು ಕೆಲಹೊತ್ತಾದರೂ ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸದ ಕಾರಣ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿತ್ತು. ಅಕ್ಕಪಕ್ಕದ ಊರುಗಳಿಗೆ ಹೋಗಲು ಜನ ಪರದಾಡಿದರು.

ಈ ಮೆಣಸಿ ಗೇಟ್ ನಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಲೇ ಇದ್ದು, ಅಪಘಾತಗಳಿಂದ ಸಾಕಷ್ಟು ಜನರಿಗೆ ಸಾವು, ನೋವುಗಳಾಗಿವೆ. ಅಪಘಾತಗಳು ನಡೆಯದಂತೆ ತಡೆಯಲು ಸಂಬಂಧಪಟ್ಟವರು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ….

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿದೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….