
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಅಜಾಕ್ಸ್ ಶಾಲೆ ಹಿಂಭಾಗ ಶವ ಪತ್ತೆಯಾಗಿದೆ…
ಮೃತ ದುರ್ದೈವಿಯನ್ನು ಒರಿಸ್ಸಾ ಮೂಲದ ಸುಮಂತ್(24) ಎಂದು ಗುರುತಿಸಲಾಗಿದೆ….
ನಿನ್ನೆ ರಾತ್ರಿ ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿದೆ….
ಮುಖದ ಮೇಲೆ, ಬಲ ಕೈ ಮೇಲೆ ಗಾಯದ ಗುರುತು ಕಂಡುಬಂದಿದ್ದು, ಹಲವು ಅನುಮಾನಗಳು ಹುಟ್ಟಿಕೊಂಡಿವೆ… ಕೊಲೆಯೋ, ಆತ್ಮಹತ್ಯೆಯೋ, ಆಕಸ್ಮಿಕ ಸಾವೋ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಲಿದೆ…
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ….
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…