
ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಸ್ಕೂಲ್ ಹೆಡ್ ಮಾಸ್ಟರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಲಮಂಗಲ-ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಆಕಾಶವಾಣಿ ಸಮೀಪ ಬಳಿ ಇಂದು ಮುಂಜಾನೆ ನಡೆದಿದೆ…

ಇಂದು ಶನಿವಾರದ ಮುಂಜಾನೆಯ ಶಾಲೆಗೆ ಬರುವ ವೇಳೆ ಆಯಾತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಗುದ್ದಿದೆ. ಇದರ ಪರಿಣಾಮ ಕಾರು ಚಾಲನೆ ಮಾಡುತ್ತಿದ್ದ ನಗರದ ಮಾರ್ಕೆಟ್ ಸ್ಕೂಲ್ ಹೆಡ್ ಮಾಸ್ಟರ್ ಜಗದೀಶಯ್ಯ ಸಿ (57) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರು ದೊಡ್ಡಬಳ್ಳಾಪುರ ತಾಲೂಕಿನ ಪುರುಷನಹಳ್ಳಿ ಮೂಲದವರು, ನೆಲಮಂಗದಲದ ಬಸವನಹಳ್ಳಿಯಲ್ಲಿ ವಾಸವಾಗಿದ್ದರು. ದೊಡ್ಡಬಳ್ಳಾಪುರ ನಗರದ ಮಾರ್ಕೆಟ್ ಶಾಲೆಯ ಮುಖ್ಯೋಪಾಧ್ಯರಾಗಿ ಕೆಲಸ ಮಾಡುತ್ತಿದ್ದರು.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.