
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ, ಡಿವೈಎಸ್ ಪಿ ಕಚೇರಿ ಮುಂಭಾಗ ನೇಕಾರ ಮಳಿಗೆ ಕಾಮಗಾರಿ ಶಂಕುಸ್ಥಾಪನೆ ಇಂದು ಶಾಸಕ ಧೀರಜ್ ಮುನಿರಾಜ್ ನೇತೃತ್ವದಲ್ಲಿ ನೆರವೇರಲಿದೆ.
ಶಿಷ್ಟಾಚಾರ ಪಾಲನೆ ಮಾಡದೇ ನಮಗೆ ಆಹ್ವಾನವಿಲ್ಲವೆಂದು ಆರೋಪಿಸಿ ಇಂದು ಮಾಜಿ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದಾರೆ….

2019ರಲ್ಲಿ ಜಿಲ್ಲಾಧಿಕಾರಿಯಾಗಿದ್ದ ಕರಿಗೌಡ ಅವರು ದೊಡ್ಡಬಳ್ಳಾಪುರ ಬ್ರಾಂಡ್ ಸೀರೆ ಮಾಡಲು ನೇಕಾರರ ಸಭೆ ಕರೆದಿದ್ದರು. ನೇಕಾರ ಮಳಿಗೆ ಸ್ಥಾಪಿಸಲು ನೇಕಾರರು ಜಿಲ್ಲಾಧಿಕಾರಿ ಬಳಿ ಮನವಿ ಮಾಡಿದರು… ಆದ್ದರಿಂದ 6 ಜಾಗದಲ್ಲಿ ನೇಕಾರ ಮಳಿಗೆ ಸ್ಥಾಪನೆ ಮಾಡಲು ನಿರ್ಧರಿಸಲಾಯಿತು…
ಈ ಹಿನ್ನೆಲೆ ಇಂದು ನೇಕಾರ ಮಳಿಗೆ ಕಾಮಗಾರಿಗೆ ಇಂದು ಶಾಸಕ ಧೀರಜ್ ಮುನಿರಾಜ್ ಅವರಿಂದ ಶಂಕುಸ್ಥಾಪನೆ ಮಾಡಲು ಮುಂದಾಗಿದ್ದಾರೆ. ಆದರೆ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ನಮಗೆ ಆಹ್ವಾನವನ್ನು ನೀಡಿದೆ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ. ಸರ್ವಾಧಿಕಾರಿ ಧೋರಣೆಯನ್ನು ಶಾಸಕ ಧೀರಜ್ ಮುನಿರಾಜ್ ತಾಳುತ್ತಿದ್ದಾರೆ ಎಂದು ಆರೋಪಿಸಿ ಇಂದು ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸುತ್ತಿದ್ದಾರೆ….

ಧೀರಜ್ ಮುನಿರಾಜ್ ವಿರುದ್ಧ ದಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ…. ಇದರ ನಡುವೆ ಪೊಲೀಸರು ಮತ್ತು ಪ್ರತಿಭಟನಾ ನಿರತರ ನಡುವೆ ಮಾತಿನ ಚಕಮಕಿ ನಡೆದಿದೆ….