ಡಿಜಿಪಿ ಶ್ರೇಣಿಯ ಐಪಿಎಸ್ ಅಧಿಕಾರಿಯೊಬ್ಬರ ರಾಸಲೀಲೆ ಪ್ರಕರಣ: ಕಾಮಕಾಂಡದ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್: ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತ

ಡಿಜಿಪಿ ಶ್ರೇಣಿಯ ಐಪಿಎಸ್ ಅಧಿಕಾರಿಯೊಬ್ಬರ ರಾಸಲೀಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಡಿಜಿಪಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಸರಸವಾಡುತ್ತಿರುವ ವಿಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಡಿಜಿಪಿ ರಾಮಚಂದ್ರ ರಾವ್ ಅವರು ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನವಾಗಿರುವ ನಟಿ ರನ್ಯಾ ರಾವ್‌ ಅವರ ಮಲ ತಂದೆಯಾಗಿದ್ದಾರೆ. ಪುತ್ರಿಯ ಕೇಸ್‌ನಲ್ಲಿ ಇವರಿಗೆ ಸಂಕಷ್ಟ ಎದುರಾಗಿತ್ತು. ಇದೀಗ ಕಚೇರಿಯಲ್ಲೇ ಮಹಿಳೆಯರೊಂದಿಗೆ ಸರಸವಾಡಿರುವ ವಿಡಿಯೊಗಳು ಬೆಳಕಿಗೆ ಬಂದಿವೆ.

ವೈರಲ್ ಆಗಿರುವ ವಿಡಿಯೊಗಳಲ್ಲಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲಿ, ಸಮವಸ್ತ್ರದಲ್ಲಿರುವಾಗಲೇ ಹಲವು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಕಂಡುಬಂದಿದೆ. ಮಾಡೆಲ್ ಸೇರಿ ಹಲವು ಮಹಿಳೆಯರ ಜತೆ ಸರಸವಾಡಿರುವ ವಿಡಿಯೊ ವೈರಲ್‌ ಆಗಿದೆ.

ಕಚೇರಿಗೆ ಕೆಲಸದ ನಿಮಿತ್ತ ಬರುವ ಮಹಿಳೆಯರ ಜತೆಗೆ ಈ ಅಧಿಕಾರಿ ಸರಸವಾಡುತ್ತಿದ್ದರು ಎನ್ನಲಾಗುತ್ತಿದ್ದು, ಅವರ ಕಾಮಕಾಂಡದ ವಿಡಿಯೊಗಳು ಈಗ ಹೊರಬಂದಿವೆ.

ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಉನ್ನತ ಅಧಿಕಾರಿಯೇ ಇಂತಹ ಕೃತ್ಯದಲ್ಲಿ ಭಾಗಿಯಾಗಿರುವುದು ಪೊಲೀಸ್‌ ಇಲಾಖೆಗೆ ತೀವ್ರ ಮುಜುಗರ ತಂದಿದೆ.

Leave a Reply

Your email address will not be published. Required fields are marked *

error: Content is protected !!