
ಇಂದು ಬೆಳಗಿನ ಜಾವ 3 ಗಂಟೆ ಸಮಯದಲ್ಲಿ ನಡೆದ ಎಸಿ ಸ್ಲೀಪರ್ ಬಸ್ ಹಾಗೂ ಕಂಟೈನರ್ ಲಾರಿ ನಡುವಿನ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಟೈನರ್ ಲಾರಿಯಲ್ಲಿದ್ದ ಕ್ಲೀನರ್ ಸಾವನ್ನಪ್ಪಿದ್ದಾನೆ.
ಬಿಹಾರ ಮೂಲದ ಶರ್ಮಾ (35) ಮೃತ ಕ್ಲೀನರ್.

ಮೃತ ದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ …
ಚಿಕ್ಕಬಳ್ಳಾಪುರ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44 ರ ನಡುವೆ ಭೀಕರ ಅಪಘಾತ ನಡೆದಿತ್ತು. ಅಪಘಾತದಲ್ಲಿ 11 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದವು.

ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ…
ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.